ಕೊಡಗು ಜಿಲ್ಲಾ ಬಂಟರ ಯುವ ಘಟಕದ ವತಿಯಿಂದ ಬಂಟ ಸಮುದಾಯ ಬಾಂಧವರ 6ನೇ ವರ್ಷದ ಕ್ರೀಡಾಕೂಟ ತಾ. 11ರಂದು (ಇಂದಿನಿಂದ) ಆರಂಭವಾಗಲಿದೆ. ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಕ್ರೀಡಾಕೂಟ ನಡೆಯಲಿದ್ದು, ಕ್ರಿಕೆಟ್, ವಾಲಿಬಾಲ್ ಸೇರಿದಂತೆ ವಿವಿಧ ಕ್ರೀಡಾಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.ತಾ. 11ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಬಂಟರ ಸಂಘದ ಉಪಾಧ್ಯಕ್ಷ ರವೀಂದ್ರ ರೈ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಡಿಕೇರಿಯ ಉದ್ಯಮಿ ಬಿ.ಡಿ. ಜಗದೀಶ್ ರೈ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಘದ ಜಿಲ್ಲಾಧ್ಯಕ್ಷ ಇಂದಿನಿಂದ ಬಂಟರ ಸಂಘದ ಕ್ರೀಡೋತ್ಸವ (ಮೊದಲ ಪುಟದಿಂದ) ಬಿ.ಡಿ. ನಾರಾಯಣ ರೈ, ಯುವ ಉದ್ಯಮಿ ಜಯಪ್ರಕಾಶ್ ರೈ, ಮಡಿಕೇರಿ ತಾಲೂಕು ಬಂಟರ ಸಂಘದ ಉಪಾಧ್ಯಕ್ಷ ಸದಾಶಿವ ರೈ ಸೇರಿದಂತೆ ತಾಲೂಕು ಹಾಗೂ ವಿವಿಧ ಹೋಬಳಿ ಘಟಕದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಉದ್ಘಾಟನೆ ಬಳಿಕ ಬಂಟರ ಯುವ ಘಟಕ ಹಾಗೂ ಪತ್ರಕರ್ತರ ತಂಡ ನಡುವೆ ಕ್ರಿಕೆಟ್ ಪ್ರದರ್ಶನ ಪಂದ್ಯ ನಡೆಯಲಿದೆ. ನಂತರ ಕ್ರಿಕೆಟ್, ವಾಲಿಬಾಲ್, ಹಗ್ಗಜಗ್ಗಾಟ, ಮಹಿಳೆಯರಿಗೆ ಥ್ರೋಬಾಲ್, ಭಾರದ ಗುಂಡು ಎಸೆತ, ಪುಟಾಣಿ ಮಕ್ಕಳಿಗೆ ಕಾಳು ಹೆಕ್ಕುವದು, ಕಪ್ಪೆ ಜಿಗಿತ, ವಿವಿಧ ವಿಭಾಗದಲ್ಲಿ ಓಟ ಸ್ಪರ್ಧೆ ನಡೆಯಲಿದೆ.
12ರಂದು ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ಹಾಗೂ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ, ಸಾಧಕರಿಗೆ ಸನ್ಮಾನ, ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.