ಮಡಿಕೇರಿ, ಮೇ 11: ಕೊಡಗು ಗೌಡ ಫುಟ್ಬಾಲ್ ಅಕಾಡೆಮಿ ವತಿಯಿಂದ ಮರಗೋಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿತಗೊಂಡಿರುವ 4ನೇ ವರ್ಷದ ಗೌಡ ಫುಟ್ಬಾಲ್ ಟ್ರೋಫಿಗೆ ಇಂದು ಚಾಲನೆ ದೊರಕಿತು. ಅರೆಭಾಷೆ ಸಾಹಿತ್ಯ ಸಂಸ್ಕೃತಿ ಅಕಾಡೆಮಿ ಮಾಜಿ ಸದಸ್ಯ ಮೋಹನ್ ದಾಸ್ ಪಂದ್ಯಾಟಕ್ಕೆ ಚಾಲನೆ ನೀಡಿದರು. ಮೊದಲ ದಿನದ ಪಂದ್ಯಾಟದಲ್ಲಿ ದೇವಜನ, ಬೊಳ್ಳುರು, ಬೈಲೋಳಿರ ತಂಡಗಳು ಮುಂದಿನ ಹಂತಕ್ಕೆ ಪ್ರವೇಶಿಸಿದವು.