ಶನಿವಾರಸಂತೆ, ಮೇ 11: ಕೊಡ್ಲಿಪೇಟೆಯ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಶ್ರೀ ಭದ್ರಕಾಳಮ್ಮ, ಶ್ರೀ ವೀರಭದ್ರೇಶ್ವರ ಸ್ವಾಮಿಯ 29ನೇ ವಾರ್ಷಿಕೋತ್ಸವ ತಾ. 14 ರಂದು ನಡೆಯಲಿದೆ. ಬೆಳಿಗ್ಗೆ 7 ಗಂಟೆಯಿಂದ ಗಂಗಾ ಪೂಜೆ, 8 ಗಂಟೆಗೆ ಸ್ವಾಮಿಗೆ ರುದ್ರಾಭಿಷೇಕ ಸಹಸ್ರ ಬಿಲ್ವಾರ್ಚನೆ, ಕುಂಕುಮಾರ್ಚನೆ, ರಾಜೋಪಚಾರ ಹಾಗೂ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನೆರವೇರಲಿದೆ.ಸಂಜೆ 6.30 ಗಂಟೆಯಿಂದ ಶ್ರೀ ವೀರಭದ್ರೇಶ್ವರ ಸ್ವಾಮಿ, ಶ್ರೀ ಭದ್ರಕಾಳಮ್ಮ ಉತ್ಸವ ಮೂರ್ತಿಗಳನ್ನು ಪುಷ್ಪಾಲಂಕೃತ ಪಲ್ಲಕ್ಕಿಯಲ್ಲಿ ಕೂರಿಸಿ, ವಾದ್ಯ ವೈಭವಗಳೊಂದಿಗೆ ವೀರಗಾಸೆ ನೃತ್ಯದೊಂದಿಗೆ ಕೊಡ್ಲಿಪೇಟೆ ಪ್ರಮುಖ ಬೀದಿಗಳಲ್ಲಿ ಉತ್ಸವ ನಡೆಸಲಾಗುವದು. ನಂತರ ದೇವಸ್ಥಾನದ ಆವರಣದಲ್ಲಿ ಕೆಂಡೋತ್ಸವ ನಡೆಯಲಿದೆ ಎಂದದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.