ಶನಿವಾರಸಂತೆ, ಮೇ 12: ಶನಿವಾರಸಂತೆ ಚಿನ್ನಳ್ಳಿ ರಸ್ತೆಯ ಪಕ್ಕದ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಕಾರ್ಮಿಕರ ದಿನಾಚರಣೆ ನಡೆಯಿತು. ಸಂಘದ ಅಧ್ಯಕ್ಷ ರತ್ನಾಕರ ಆಚಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಟ್ಟಡ ಕಾರ್ಮಿಕರೆಲ್ಲರೂ ಸಂಘಟಿತರಾಗಬೇಕು. ಸರಕಾರ ಕಾರ್ಮಿಕರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದೆ. ಆದರೆ ಕಾರ್ಮಿಕರಿಗೆ ಮಾಹಿತಿ ಕೊರತೆಯಿಂದ ಸೇವೆ, ಸವಲತ್ತುಗಳು ದೊರೆಯುತ್ತಿಲ್ಲ. ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ ಸೇರಿದಂತೆ ಶಿಕ್ಷಣಕ್ಕೆ ಪೂರಕವಾದ ಸವಲತ್ತುಗಳಿರುವ ನಿಟ್ಟಿನಲ್ಲಿ ಇವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಕಾರ್ಮಿಕರ ಸಂಘಗಳಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು.

ದಿನಾಚರಣೆಯಲ್ಲಿ ಸಂಘದ ಉಪಾಧ್ಯಕ್ಷ ಪ್ರಕಾಶ್, ಕಾರ್ಯದರ್ಸಿ ಪಾಲಾಕ್ಷ, ಸದಸ್ಯರುಗಳಾದ ಲಿಂಗಪ್ಪ, ಸತೀಶ್ ಹಾಗೂ ಇತರರು ಉಪಸ್ಥಿತರಿದ್ದರು.