ಮಡಿಕೇರಿ, ಮೇ 12: ಕೇಂದ್ರ ಸರ್ಕಾರದ ವಯೋಶ್ರೇಷ್ಠ ಸಮ್ಮಾನ್(ರಾಷ್ಟ್ರ ಪ್ರಶಸ್ತಿಗೆ) ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ, ಸಂಸ್ಥೆಗಳಿಂದ ಹಿರಿಯ ನಾಗರಿಕರಿಗೆ ಅತ್ಯುತ್ತಮ ಸೇವೆಗಳು ಮತ್ತು ಸೌಲಭ್ಯಗಳನ್ನು ಒದಗಿಸಿದ ಸ್ಥಳೀಯ ನಗರಾಭಿವೃದ್ಧಿ ಸಂಸ್ಥೆಗೂ ಸಹ ನೀಡಲಾಗುತ್ತಿದ್ದು ಅರ್ಜಿ ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ನ್ಯಾಯಾಲಯದ ಮುಂಭಾಗ, ಕೋಟೆ ಆವರಣ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿಂದ ಪಡೆದು ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರ ಕಚೇರಿಗೆ ಸಲ್ಲಿಸಬೇಕು. ನಮೂನೆಯಲ್ಲಿನ ಪ್ರತಿಯೊಂದು ಕಾಲಂ ಅನ್ನು ಸಹ ಪೂರ್ಣವಾಗಿ ಮಾಹಿತಿಯೊಂದಿಗೆ ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ತ್ರಿಪ್ರತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08272-222830, 222829 ನ್ನು ಸಂಪರ್ಕಿಸಬಹುದು.