ಕೂಡಿಗೆ, ಮೇ 12: ಹುದುಗೂರು ಗ್ರಾಮದಲ್ಲಿರುವ ಉಮಾಮಹೇಶ್ವರ ಕ್ಷೇತ್ರದ 29ನೇ ವರ್ಷದ ಪ್ರತಿಷ್ಠಾಪನಾ ಉತ್ಸವ ಕಾರ್ಯಕ್ರಮ ತಾ. 16 ರಂದು ಕ್ಷೇತ್ರದ ಆವರಣದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಗಣಪತಿ ಹೋಮ, ಶ್ರೀ ಮೃತ್ಯುಂಜಯ ಹೋಮ ಪ್ರಧಾನ ದೇವರಿಗೆ ಹಾಗೂ ಇತರೆ ಉಪದೇವತೆಗಳಿಗೆ ವಿಶೇಷ ಅಭಿಷೇಕ, ಅರ್ಚನೆ ಇತ್ಯಾದಿ ಪೂಜೆಗಳು ನಡೆದು ಮಧ್ಯಾಹ್ನ 1 ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ. ಚಾಮಿ ತಿಳಿಸಿದ್ದಾರೆ.