ನಾಪೋಕ್ಲು, ಮೇ 12: ಇಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ಏರ್ಪಡಿಸಲಾಗಿದ್ದ 19ನೇ ವರ್ಷದ ಬೇಸಿಗೆ ಶಿಬಿರದ ಸಮಾರೋಪ ತಾ. 14 ರಂದು ನಡೆಯಲಿದೆ. ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್‍ಪೂವಯ್ಯ ನೆರವೇರಿಸುವರು. ಅಕಾಡೆಮಿ ಅಧ್ಯಕ್ಷ ಕಲಿಯಂಡ ಸಾಬು ಅಯ್ಯಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾಜಿ ಸೈನಿಕ ಕೊಂಡೀರ ನಾಣಯ್ಯ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುಖ್ಯೋಪಾಧ್ಯಾಯಿನಿ ಬಡ್ಡೀರ ನಳಿನಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.