ಕುಶಾಲನಗರ, ಮೇ 14: ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ಹೊಂದುವಂತಾಗಬೇಕು ಎಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಡಿ.ಪಿ. ಸುಮನ ಅವರು ಕರೆ ನೀಡಿದ್ದಾರೆ. ಅವರು ಕುಶಾಲನಗರದಲ್ಲಿ ಕಾವೇರಿ ಪರಿಸರ ರಕ್ಷಣಾ ಬಳಗದ ಆಶ್ರಯದಲ್ಲಿ ಪಟ್ಟಣದಲ್ಲಿ 100 ನೆರಳು ಗಿಡ ನೆಡುವ ಯೋಜನೆಗೆ ಸ್ಥಳೀಯ ಸರಕಾರಿ ಬಸ್ ನಿಲ್ದಾಣ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭ ಪ್ರಾಸ್ತಾವಿಕವಾಗಿ ಮಾತನಾಡಿದ ಬಳಗದ ಸಂಚಾಲಕ ಎಂ.ಎನ್. ಚಂದ್ರಮೋಹನ್, ಪಟ್ಟಣದ ಹಸಿರೀಕರಣದ ಉದ್ದೇಶದೊಂದಿಗೆ ಸ್ಥಳೀಯ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಮುಂದಿನ 3 ತಿಂಗಳ ಅವಧಿಯಲ್ಲಿ 100 ನೆರಳು ಗಿಡಗಳನ್ನು ನೆಟ್ಟು ನಿರ್ವಹಣೆ ಮಾಡುವ ಉದ್ದೇಶ ಹೊಂದಿರುವದಾಗಿ ಮಾಹಿತಿ ನೀಡಿದರು.

ಈ ಸಂದರ್ಭ ಕುಶಾಲನಗರ ಡಿವೈಎಸ್ಪಿ ದಿನಕರ ಶೆಟ್ಟಿ, ವೃತ್ತ ನಿರೀಕ್ಷಕ ದಿನೇಶ್ ಕುಮಾರ್, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಮೃತ್‍ರಾಜ್, ಬಳಗದ ಪ್ರಮುಖರಾದ ಡಿ.ಆರ್. ಸೋಮಶೇಖರ್, ಮಂಡೇಪಂಡ ಬೋಸ್ ಮೊಣ್ಣಪ್ಪ, ಕೆ.ಆರ್. ಶಿವಾನಂದನ್, ನಿವೃತ್ತ ಮುಖ್ಯಶಿಕ್ಷಕ ಎಂ.ಹೆಚ್. ನಜೀರ್ ಅಹಮ್ಮದ್, ರೋಟರಿ ಪದಾಧಿಕಾರಿಗಳು ಮತ್ತು ಬಳಗದ ಸದಸ್ಯರು ಇದ್ದರು.