ಚೆಟ್ಟಳ್ಳಿ, ಮೇ 14: ಈರಳೆವಳಮುಡಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ 25 ವರ್ಷಗಳ ಕಾಲ ಕಾರ್ಯಕರ್ತೆಯಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ ಚೋಳಪಂಡ ಬೊಳ್ಳಮ್ಮ ಪೂವಯ್ಯ ಅವರನ್ನು ಸನ್ಮಾನಿಸಿ ಬೀಳ್ಕೊಟ್ಟರು.

ಬೀಳ್ಕೊಡುಗೆ ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಪಿಡಿಓ, ಅಧ್ಯಕ್ಷರು ಉಪಾಧ್ಯಕ್ಷರು, ಇಲಾಖಾ ಅಧಿಕಾರಿ ಪಾಲ್ಗೊಂಡು ಬೊಳ್ಳಮ್ಮ ಅವರ ಸೇವೆಯನ್ನು ಸ್ಮರಿಸಲಾಯಿತು.