*ಸಿದ್ದಾಪುರ, ಮೇ 14: ಕೊಡಗು ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರ್ವ ಶಿಕ್ಷಣ ಅಭಿಯಾನದ ಸಹಭಾಗಿತ್ವದಲ್ಲಿ ವಾಲ್ನೂರು-ತ್ಯಾಗತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಸಂಭ್ರಮ ಕಾರ್ಯಕ್ರಮದಡಿ ಶಿಬಿರ ಆಯೋಜನೆ ಯಶಸ್ವಿಯಾಗಿ ನಡೆಯಿತು. ಮಕ್ಕಳಿಗೆ ಪಠ್ಯ ಅಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆ ಮೂಲಕ ಕೌಶಲ್ಯ ಅಭಿವೃದ್ಧಿ, ಸಮಾಜ ಕಾರ್ಯ ಮುಂತಾದವಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಆಯೋಜಿಸಿದ ಕಾರ್ಯಕ್ರಮ ದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು. ನೀರಿನ ಬಳಕೆ, ನೈರ್ಮಲ್ಯ ಕಾಪಾಡುವದು, ಪರಿಸರ ಸಂರಕ್ಷಣೆ ಮತ್ತು ಕ್ರೀಡೆ ಮುಂತಾದವಗಳ ಬಗ್ಗೆ ಮಕ್ಕಳಲ್ಲಿ ಅರಿವನ್ನು ಮೂಡಿಸಲಾಯಿತು.