ಕುಶಾಲನಗರ, ಮೇ 14: 2018-19ನೇ ಸಾಲಿನ 10ನೇ ಮತ್ತು 12ನೇ ತರಗತಿಯ ಸಿಬಿಎಸ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಕೂಡಿಗೆ ಸೈನಿಕ ಶಾಲೆ ಶೇ. 100 ಫಲಿತಾಂಶ ಪಡೆದುಕೊಂಡಿದೆ. ಶಾಲೆಯ 12ನೇ ತರಗತಿಯಲ್ಲಿ ಒಟ್ಟು 59 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 19 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‍ನಲ್ಲಿ ತೇರ್ಗಡೆಗೊಂಡಿದ್ದಾರೆ. 10ನೇ ತರಗತಿಯಲ್ಲಿ ಒಟ್ಟು 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 79 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‍ನಲ್ಲಿ ತೇರ್ಗಡೆಯಾಗಿದ್ದಾರೆ.