ಶನಿವಾರಸಂತೆ, ಮೇ 15: ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಬಳೂರು ಗ್ರಾಮದ ಬೆಂಬಳೂರು ಹೊಳೆ ದಡದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 30 ಲೋಡ್ ಮರಳನ್ನು ಡಿವೈಎಸ್‍ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ಪೊಲೀಸರು ವಶಪಡಿಸಿಕೊಂಡ ಘಟನೆ ಬುಧವಾರ ನಡೆದಿದೆ.
ಈ ಪ್ರದೇಶದಲ್ಲಿ 5-6 ತಿಂಗಳಿನಿಂದ ನಿರಂತರವಾಗಿ ಅಕ್ರಮ ಮರಳು ದಂಧೆ ನಡೆಯುತ್ತಿರುವ ಬಗ್ಗೆ ಗ್ರಾಮಸ್ಥರು ದೂರು ಸಲ್ಲಿಸುತ್ತಲೇ ಇದ್ದರೂ ಪೊಲೀಸರು ವಶಪಡಿಸಿಕೊಂಡಿರುವ ಅಕ್ರಮ ಸಂಗ್ರಹಣೆಯ ಮರಳು ಯಾರಿಗೆ ಸೇರಿದ್ದೆಂದು ತಿಳಿದು ಬಂದಿಲ್ಲ. ಪತ್ತೆ ಹಚ್ಚಲು ಸೂಕ್ತ ಕ್ರಮ ಕೈಗೊಂಡಿದ್ದಾರೆ. ಡಿವೈಎಸ್‍ಪಿ ಪಿ. ದಿನಕರನ್ ಶೆಟ್ಟಿ ಕೊನೆಗೂ ಅಕ್ರಮ ಮರಳು ದಂಧೆಗೆ ಮುಕ್ತಾಯ ಹಾಡಿದ್ದಾರೆ ಎಂದು ಅಲ್ಲಿನ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.