ಮಡಿಕೇರಿ, ಮೇ 15: 2018 ರ ಮುಂಗಾರುವಿನಲ್ಲಿ ಕೊಡಗಿನಲ್ಲಿ ಸಂಭವಿಸಿದ ಜಲಸ್ಫೋಟದಂತಹ ಭೀಕರತೆಗೆ ಹಾರಂಗಿ ಜಲಾಶಯವು ಕಾರಣವಾಗಿದೆ ಎಂದು ಆಕ್ಷೇಪಿಸಿರುವ ಕೊಡವ ನ್ಯಾಷನಲ್ ಕೌನ್ಸಿಲ್ (ಸಿ.ಎನ್.ಸಿ.) ಸಂಘಟನೆ ತಾ. 17 ರಂದು (ನಾಳೆ) ಹಾರಂಗಿ ಜಲಾಶಯವನ್ನು ತುರ್ತಾಗಿ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾಗಿದೆ.
ಈ ಕುರಿತು ಹೇಳಿಕೆ ನೀಡಿರುವ ಸಿ.ಎನ್.ಸಿ. ಅಧ್ಯಕ್ಷ ಎನ್.ಯು. ನಾಚಪ್ಪ ಅವರು ತಾ. 17 ರಂದು ಈ ಒತ್ತಾಯ ಮುಂದಿರಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಿರುವದಾಗಿ ತಿಳಿಸಿದ್ದಾರೆ.