ಶನಿವಾರಸಂತೆ, ಮೇ 15: ಬೆಸೂರು ಗ್ರಾಮದ ಪಂಚಾಯಿತಿಯಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಕೂಡ್ಲೂರು ಗ್ರಾಮದ ಭಾಗ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗ್ರಾಮ ಪಂಚಾಯಿತಿಯ ಹಿಂದಿನ ಅಧ್ಯಕ್ಷರಾದ ಸಿ.ಜೆ. ಪಾರ್ವತಿ ಸುರೇಶ್ ಅವರು ಅವಿಶ್ವಾಸ ನಿರ್ಣಯ ಮೂಲಕ ಪದಚ್ಯುತಿಗೊಂಡಿದ್ದ ಸ್ಥಾನದಲ್ಲಿ ಉಪಾಧ್ಯಕ್ಷೆ ಸುಜಾತ ಪ್ರಬಾರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಜಿಲ್ಲಾಧಿಕಾರಿಗಳ ಆದೇಶದಂತೆ ಸೋಮವಾರಪೇಟೆ ತಹಶೀಲ್ದಾರ್ ಗೋವಿಂದ್ ರಾಜ್ ಅವರು ಚುನಾವಣೆ ಪ್ರಕ್ರಿಯೆ ನಡೆಸಿದ್ದು, ಅಧ್ಯಕ್ಷ ಸ್ಥಾನಕ್ಕೆ ಭಾಗ್ಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.