ಸೋಮವಾರಪೇಟೆ, ಮೇ 15: ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುತ್ತಿರುವ, ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ, 2019-20ನೇ ಸಾಲಿಗೆ 5 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ, ಶಿರಂಗಾಲ, ಕುಶಾಲನಗರ, ಆಲೂರು-ಸಿದ್ದಾಪುರ, ಸುಂಟಿಕೊಪ್ಪ, ಚೆಟ್ಟಳ್ಳಿ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಮೇಲ್ಕಂಡ ವಿದ್ಯಾರ್ಥಿನಿಲಯಗಳಿಗೆ 5 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರವರ್ಗ- 1, 2ಎ, 2ಬಿ, 3ಎ. 3ಬಿ. ಅವರುಗಳಿಗೆ ವಾರ್ಷಿಕ ಆದಾಯ ಮಿತಿ ರೂ. 44500 ರೂ. ಆಗಿರುತ್ತದೆ. ಪ್ರವರ್ಗ-1 ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯ ಮಿತಿ ರೂ. 100000 (ರೂ. ಒಂದು ಲಕ್ಷ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ರೂ. 200000 (ರೂ. ಎರಡು ಲಕ್ಷ) ಆಗಿರುತ್ತದೆ.
ಪ್ರವೇಶದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ದೃಢೀಕರಣ ಪತ್ರ. ಹಿಂದಿನ ಸಾಲಿನಲ್ಲಿ ಉತ್ತೀರ್ಣರಾದ ಬಗ್ಗೆ ಅಂಕಪಟ್ಟಿ, ವಾಸಸ್ಥಳದ ದೃಢೀಕರಣ ಪತ್ರ, ಇತ್ತೀಚಿನ ಪಾಸ್ಪೋರ್ಟ್ ಅಳತೆಯ 4 ಫೋಟೋಗಳನ್ನು ಭರ್ತಿಗೊಳಿಸಲಾದ ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 20. ಅರ್ಜಿಗಳ್ನು ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳಲ್ಲಿ ವಿತರಣೆ ಮಾಡಲಾಗುವದು.
10ನೇ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ರೂ. 1000 ಸೇರಿದಂತೆ ಇತರ ಸೌಲಭ್ಯಗಳನ್ನು ನೀಡಲಾಗುವದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರು ಹಾಗೂ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.