ಮಡಿಕೇರಿ, ಮೇ 15: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಶ್ರೀ ಭಗೀರಥ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯುತ್ಸವ ನಡೆಯಿತು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಸಿಇಒ ಕೆ. ಲಕ್ಷ್ಮಿಪ್ರಿಯಾ, ಜಿ.ಪಂ. ಉಪ ಕಾರ್ಯದರ್ಶಿ ಗುಡೂರು ಭೀಮಸೇನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಟಿ. ದರ್ಶನ್, ಇತರರು ಶ್ರೀ ಭಗೀರಥ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡಿ ಗೌರವ ನಮನ ಸಲ್ಲಿಸಿದರು.
ಬಳಿಕ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ಶ್ರೀ ಭಗೀರಥ ಅವರು ಶ್ರದ್ಧೆ, ಕಠಿಣ ಶ್ರಮದಿಂದ ಇತರರಿಗೆ ಮಾದರಿಯಾಗಿ ಬದುಕು ನಡೆಸಿದರು. ಇವರ ಆದರ್ಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಮೈಗೂಡಿಸಿ ಕೊಳ್ಳುವಂತಾಗಬೇಕು ಎಂದು ಹೇಳಿದರು.
ಜಿ.ಪಂ. ಉಪ ಕಾರ್ಯದರ್ಶಿ ಗುಡೂರು ಭೀಮಸೇನ ಮಾತನಾಡಿ, ಶತಮಾನಗಳ ಹಿಂದೆ ರಾಜರಾಗಿ ಆಡಳಿತ ನಡೆಸಿದ ಭಗೀರಥರ ಕಠಿಣ ತಪಸ್ಸು ಇತರರಿಗೆ ಮಾದರಿ ಯಾಗಬೇಕು.
ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಪ್ರತಿಭೆಯಿದ್ದು, ಭಗೀರಥರಂತೆ ಪ್ರಯತ್ನಪಟ್ಟಾಗ ಮಾತ್ರ ಯಶಸ್ಸು ಸಾಧಿಸಬಹುದು ಎಂದರು.
ಹೇಮರೆಡ್ಡಿ ಮಲ್ಲಮ್ಮ ಅವರ ಜೀವನ ಸರ್ವರಿಗೂ ಅನುಕರಣೀಯ ವಾದದ್ದು, ಅವರು ಸರಳತೆ, ಶಿವಭಕ್ತಿಯಿಂದ ಸಮಾಜದಲ್ಲಿನ ವಿವಿಧ ಸಮಸ್ಯೆಗಳನ್ನು ಪರಿಹರಿಸಿದರು ಮತ್ತು ಜನರಲ್ಲಿ ಆಧ್ಯಾತ್ಮ ಭಾವನೆ ಮೂಡಿಸಿದರು ಎಂದು ತಿಳಿಸಿದರು.