ಮಡಿಕೇರಿ, ಮೇ 16: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ಮೂಲಕ ಸೀಟು ಪಡೆದು ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಲು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆಯ ಬಯಸುವ ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ, ಪ್ರ-3ಎ ಮತ್ತು ಪ್ರ-3ಬಿ ಗೆ ಸೇರಿದ್ದು, ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿಇಟಿ ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ. 2ರ ಬಡ್ಡಿ ದರದಲ್ಲಿ ವಾರ್ಷಿಕ ಗರಿಷ್ಠ ರೂ. 1 ಲಕ್ಷಗಳವರೆಗೆ ಸಾಲ ಮಂಜೂರು ಮಾಡಲಾಗುತ್ತದೆ.

ಸಿಇಟಿ ಮೂಲಕ ಆಯ್ಕೆಯಾಗಿ ಸಾಲ ಪಡೆಯ ಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ಗಳು ಸಿಇಟಿಗೆ ಪಾವತಿಸಬೇಕಾದ ಶುಲ್ಕವನ್ನು ಸಿಇಟಿಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೊಂದಾಣಿಕೆ ಮಾಡಿಕೊಡಲಾಗುತ್ತದೆ.

ಪ್ರವರ್ಗ-1 ಮತ್ತು 2ಎಗೆ ಶೇ.70 ಹಾಗೂ ಪ್ರವರ್ಗ 3ಎ, 3ಬಿಗೆ ಶೇ. 30 ರಂತೆ ಆಯ್ಕೆ ಮಾಡಲಾಗುವದು. 2019-20ನೇ ಸಾಲಿಗೆ ಸರ್ಕಾರವು ಒದಗಿಸಿದ ಅನುದಾನದ ಮಿತಿಯಲ್ಲಿ ಆಯ್ಕೆ ಮಾಡಲಾಗುವದು. ಸಿಇಟಿ ಮೂಲಕ ಆಯ್ಕೆಯಾಗುವ ವಿದ್ಯಾರ್ಥಿಗಳನ್ನು ಕೋರ್ಸ್‍ವಾರು ಮತ್ತು ರ್ಯಾಂಕುವಾರು ಆಧಾರದಲ್ಲಿ ಸಾಲ ಮಂಜೂರಾತಿಗೆ ಆಯ್ಕೆ ಮಾಡಲಾಗುವದು.

ಸಾಲ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವೆಬ್‍ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ರಲ್ಲಿ ಲಾಗಿನ್ ಆಗಿ ವೆಬ್ ಸೈಟ್‍ನಲ್ಲಿ ಲಭ್ಯವಿರುವ Useಡಿಟಿಚಿme -ಚಿಡಿivu ಮತ್ತು Pಚಿssತಿಚಿಡಿಜ-ಚಿಡಿivu@123 ನ್ನು ನಮೂದಿಸಿ ಅರ್ಜಿಯನ್ನು ಆನ್‍ಲೈನ್‍ಲ್ಲಿ ಭರ್ತಿ ಮಾಡುವದು. ದೂರವಾಣಿ ಸಂಖ್ಯೆ: 08272-221656 ಮೂಲಕ ಹಾಗೂ ಸಹಾಯವಾಣಿ 8197249898/8095267253 ನ್ನು ಸಂಪರ್ಕಿಸಬಹುದು.