ವೀರಾಜಪೇಟೆ, ಮೇ 17: ಮರೆನಾಡು ಕೊಡವ ಸಮಾಜ ಕಟ್ಟಡ ನಿರ್ಮಾಣ ಮಾಡಲು ಭೂಕಾಯ್ದೆ ಅನ್ವಯ ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಸಮಾಜದ ಕಾನೂನು ಸಲಹೆಗಾರ ಕೊಕ್ಕಂಡ ಅಪ್ಪಣ್ಣ ಲಿಖಿತ ಹೇಳಿಕೆಯಲ್ಲಿ ತಿಳಿಸಿದ್ದಾರೆ.

2002ರಲ್ಲಿ ಅಸ್ಥಿತ್ವಕ್ಕೆ ಬಂದಿದ್ದು ಕಟ್ಟಡ ಕಟ್ಟಲು ಸ್ಥಳಾವಕಾಶದ ಕೊರತೆ ಇದ್ದ ಕಾರಣ ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗೆ ಬಳಸಲು ಭೂಮಿಯನ್ನು ಖರೀದಿಸಲು ಸರಕಾರದ ಅನುಮತಿ ಬೇಕಾದ ಕಾರಣ ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಮನವಿ ನೀಡುವ ಸಂದರ್ಭ ಸಮಾಜದ ಅಧ್ಯಕ್ಷ ಮಲ್ಲೆಂಗಡ ಪೊನ್ನುಮಣಿ, ಧನಂಜಯ, ಅಣ್ಣಾಳಮಾಡ ಲಾಲ ಅಪ್ಪಣ್ಣ, ಬೊಳ್ಳೆರ ಪೊನ್ನಪ್ಪ ಉಪಸ್ಥಿತರಿದ್ದರು.