ವೀರಾಜಪೇಟೆ, ಮೇ 17: ವೀರಾಜಪೇಟೆ ಸಮೀಪದ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂ 371/1 ರಲ್ಲಿ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ನಿವೇಶನಕ್ಕಾಗಿ ಮೀಸಲಿರಿಸಿದ್ದ ಜಾಗಕ್ಕೆ ಈಗ ಇತರೆಡೆಗಳಿಂದ ವಲಸೆ ಬಂದವರು ಅನಧಿಕೃತವಾಗಿ 50 ಕ್ಕೂ ಹೆಚ್ಚು ಗುಡಿಸಲುಗಳನ್ನು ಹಾಕಿ ಕೊಂಡಿದ್ದಾರೆ. ತಕ್ಷಣ ಅವರನ್ನು ತೆರವುಗೊಳಿಸಿ ನಿವೇಶನ ರಹಿತ ಸ್ಥಳೀಯ ಕೂಲಿ ಕಾರ್ಮಿಕರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಕೆದಮುಳ್ಳೂರು, ಪಾಲಂಗಾಲ, ಕೊಟ್ಟೋಳಿ ಗ್ರಾಮಸ್ಥರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ತಹಶೀಲ್ದಾರ್ ಬಿ.ಎಂ.ಗೋವಿಂದರಾಜು ಅವರಿಗೆ ಮನವಿ ಸಲ್ಲಿದರು.