ಕುಶಾಲನಗರ, ಮೇ 17: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕುಶಾಲನಗರದ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ಅಭಿವೃದ್ಧಿ ಕಾರ್ಯಗಳಿಗೆ 1 ಲಕ್ಷ ರೂ.ಗಳ ಡಿಡಿ ಹಸ್ತಾಂತರಿಸಲಾಯಿತು. ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ದೇವಾಲಯದ ಅಭಿವೃದ್ಧಿ ಕಾರ್ಯಕ್ಕೆ ಬಿಡುಗಡೆಗೊಂಡ ರೂ. 1 ಲಕ್ಷ ಮೊತ್ತದ ಡಿಡಿಯನ್ನು ಕೊಡಗು ಜಿಲ್ಲಾ ಯೋಜನಾ ನಿರ್ದೇಶಕ ಯೋಗೀಶ್ ದೇವಾಲಯ ಸಮಿತಿ ಅಧ್ಯಕ್ಷ ಬಿ.ಪಿ. ಗಣಪತಿ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಯೋಜನೆಯ ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ವೈ. ಪ್ರಕಾಶ್, ಸೇವಾ ಪ್ರತಿನಿಧಿ ಜಯಲಕ್ಷ್ಮಿ ದೇವಾಲಯ ಸಮಿತಿ ಉಪಾಧ್ಯಕ್ಷ ಪಿ.ಜಿ. ಗಂಗಾಧರ್, ಟ್ರಸ್ಟಿಗಳಾದ ಡಿ.ಆರ್. ಸೋಮಶೇಖರ್, ಎಂ.ಎನ್. ಚಂದ್ರಮೋಹನ್, ಅರ್ಚಕ ವಿಷ್ಣುಮೂರ್ತಿ ಭಟ್ ಇದ್ದರು.