ಮಡಿಕೇರಿ, ಮೇ 17: ನಗರದ ಕೋಟೆ ಆವರಣದಲ್ಲಿರುವ ಸರ್ಕಾರಿ ವಸ್ತುಸಂಗ್ರಹಾಲಯ ವತಿಯಿಂದ ತಾ. 18 ರಂದು (ಇಂದು) ಮತ್ತು ತಾ. 19 ರಂದು (ನಾಳೆ) ಅಂತರ್ರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆಯ ಪ್ರಯುಕ್ತ ಕ್ರಿ.ಶ. 1730 ರಿಂದ ಕ್ರಿ.ಶ 1907 ಕಾಲಕ್ಕೆ ಸೇರಿದ ಕೊಡಗು ಜಿಲ್ಲೆಯ ವಿವಿಧ ಐತಿಹಾಸಿಕ ಸ್ಥಳಗಳು ಮತ್ತು ಕಟ್ಟಡಗಳ ಛಾಯಾಚಿತ್ರಗಳ ಪ್ರದರ್ಶನ ಹಾಗೂ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಪ್ರಕಟಣಾ ಪುಸ್ತಕಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ಸರ್ಕಾರಿ ವಸ್ತು ಸಂಗ್ರಹಾಲಯದ ಅಧಿಕಾರಿ ಬಿ.ಪಿ.ರೇಖಾ ತಿಳಿಸಿದ್ದಾರೆ. ತಾ. 18 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನಗರದ ಕೋಟೆಯ ಸರ್ಕಾರಿ ವಸ್ತು ಸಂಗ್ರಹಾಲಯದಲ್ಲಿ ಅಪರೂಪದ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ದೊರೆಯಲಿದೆ.