ಮಡಿಕೇರಿ, ಮೇ 17: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ವತಿಯಿಂದ ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಸಂಸ್ಥೆಯ ಮುಖಾಂತರ ತಾ. 19ರಂದು (ನಾಳೆ) ಮಧ್ಯಾಹ್ನ 2.30 ಗಂಟೆಗೆ ಕೂರ್ಗ್ ಇಂಟರ್‍ನ್ಯಾಷನಲ್ ಹೊಟೇಲ್ ಸಭಾಂಗಣದಲ್ಲಿ , ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಸಂತ್ರಸ್ತರಿಗೆ ಪರಿಹಾರ ವಿತರಿಸುವ ಕಾರ್ಯಕ್ರಮ ನಡೆಯಲಿದೆ.