ಮಡಿಕೇರಿ, ಮೇ 16: ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿನ ಮಡಿಕೇರಿ ಜೋಡುಪಾಲ ರಸ್ತೆಯಲ್ಲಿ ಅತಿವೃಷ್ಟಿಗೆ ಹಾನಿಯಾದ ರಸ್ತೆಯ ನಿರ್ಮಾಣ ಕಾಮಗಾರಿಯನ್ನು ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಪ್ರಾರಂಭಿಸಿದ್ದು, ರಸ್ತೆ ಹಾನಿಗೊಳಗಾದ ಪ್ರದೇಶದಲ್ಲಿ 300 ಮೀಟರ್ ವಿಸ್ತಾರದ 30 ಅಡಿ ಉದ್ದದ ತಡೆಗೋಡೆ ನಿರ್ಮಾಣಕ್ಕೆ ಕ್ರಮ ಕೈಗೊಂಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಮಡಿಕೇರಿ, ಮೇ 16 : ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮತ್ತು ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಗಾಳಿಬೀಡು ಪಂಚಾಯತ್ ವ್ಯಾಪ್ತಿಯ 2 ನೇ ಮೊಣ್ಣಂಗೇರಿ ಗ್ರಾಮದಲ್ಲಿ ಪ್ರಕೃತಿ ವಿಕೋಪಕ್ಕೆ ತುತ್ತಾದ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಪೂರ್ಣ, ಭಾಗಶಃ ಹಾನಿಗೀಡಾದ ಮನೆಗಳನ್ನು ಪರಿಶೀಲಿಸಿದರು.

ಹಾಗೆಯೇ ರಸ್ತೆ, ಕುಡಿಯುವ ನೀರು, ಮನೆ ಪರಿಹಾರ, ಬೆಳೆ ಪರಿಹಾರ, ಮನೆ ಬಾಡಿಗೆ ಹಾಗೂ ಇನ್ನಿತರ ಪ್ರಮುಖ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಪರಿಹಾರ ವಂಚಿತರ ಬಗ್ಗೆ ತಕ್ಷಣವೇ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸ್ಥಳದಲ್ಲಿದ್ದ ನೊಡೆಲ್ ಅಧಿಕಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.