ಮಡಿಕೇರಿ, ಮೇ 17: ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗಾಗಿ ಅನುಷ್ಠಾನಗೊಳಿಸಿರುವ ಯೋಜನೆಗಳಾದ ಹಿರಿಯ ನಾಗರಿಕರಿಗೆ ಆನ್ಲೈನ್ ಮೂಲಕ ಗುರುತಿನ ಚೀಟಿ ವಿತರಣೆ, ವಿಶೇಷಚೇತನರಿಗೆ ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹಧನ, ಸಾಧನ ಸಲಕರಣೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ, ಅಂಧ ಮಹಿಳೆಗೆ ಜನಿಸುವ ಮಕ್ಕಳ ಶಿಶುಪಾಲನಾ ಭತ್ಯೆ, ಯಂತ್ರ ಚಾಲಿತ ತ್ರಿಚಕ್ರ ವಾಹನ ಯೋಜನೆ, ಉನ್ನತ ಶಿಕ್ಷಣ ಪಡೆಯುತ್ತಿರುವ ವಿಶೇಷಚೇತನ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆ, ವಿಶೇಷಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ಪ್ರೋತ್ಸಾಹ ಧನ ಯೋಜನೆ, ಸ್ಪರ್ಧಾ ಚೇತನ, ಸಾಧನೆ ಪ್ರತಿಭೆ, ಎಸ್.ಎಸ್.ಎಲ್.ಸಿ. ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆಗಳಿಗೆ 2019-20ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಾಯವಾಣಿ ಕೇಂದ್ರದ ದೂರವಾಣಿ; 08272-222830 ಹಾಗೂ ಕಚೇರಿ ಸಂಖ್ಯೆ 222829 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಹಾಗೂ ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ನ್ಯಾಯಾಲಯ ಮುಂಭಾಗ ಕೋಟೆ ಆವರಣದಲ್ಲಿ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಶೇಷಚೇತನರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ವಸತಿ ಶಾಲೆ ಪ್ರವೇಶಕ್ಕೆ
ಪ್ರಸಕ್ತ (2019-20) ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಗೊಳಪಡುವ ಕಕ್ಕಬೆ ವಸತಿ ಶಾಲೆಗೆ 1 ರಿಂದ 5ನೇ ತರಗತಿವರೆಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಇತರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಉಚಿತವಾಗಿ ಸಮವಸ್ತ್ರ, ಬ್ಯಾಗ್, ದಾಖಲಾತಿ (ಶುಲ್ಕ ರಹಿತ), ಲೇಖನ ಸಾಮಗ್ರಿ, ಹಾಸ್ಟೇಲ್ ಸೌಲಭ್ಯ ಇರುತ್ತದೆ. ಮೆನು ಪ್ರಕಾರ ಪೌಷ್ಟಿಕ ಆಹಾರ ಪೂರೈಕೆ, ನುರಿತ ಶಿಕ್ಷಕರಿಂದ ಬೋಧನೆ, ತಿಂಗಳಿಗೆ ಉಚಿತ ಶುಚಿ ಸಂಭ್ರಮ ಕಿಟ್ (ಸೋಪು, ಪೇಸ್ಟ್, ಬ್ರಷ್, ತೆಂಗಿನೆಣ್ಣೆ), ಆರೋಗ್ಯ ತಪಾಸಣೆ ನಡೆಸಲಾಗುವದು. ಆಸಕ್ತ ವಿದ್ಯಾರ್ಥಿಗಳು ಮುಖ್ಯ ಶಿಕ್ಷಕರು, ವಸತಿ ಶಾಲೆ, ಕಕ್ಕಬೆ, ಮಡಿಕೇರಿ ತಾಲೂಕು ಇಲ್ಲಿಂದ ಅರ್ಜಿ ಪಡೆದುಕೊಂಡು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವಾಗ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ವಾಸಸ್ಥಳ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿ ಹಾಗೂ ಹಿಂದಿನ ತರಗತಿ ಅಂಕಪಟ್ಟಿಯನ್ನು ಹೊಂದಿರತಕ್ಕದ್ದು. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿನ ಕಚೇರಿ ದೂ. 08272-223552 ನ್ನು ಸಂಪರ್ಕಿಸಬಹುದು.
ಪ್ರೋತ್ಸಾಹ ಧನಕ್ಕೆ
2018-19ನೇ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಇಲಾಖಾ ವೆಬ್ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಲು 2019ರ ಡಿಸೆಂಬರ್, 31 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ, ಪಿ.ಯು.ಸಿ., ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ವೈದ್ಯಕೀಯ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪ್ರತಿ ಸೆಮಿಸ್ಟರ್ನಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು.
ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದಡಿಯಲ್ಲಿ 3 ವರ್ಷಗಳ ಪಾಲಿಟೆಕ್ನಿಕ್, ಡಿಪ್ಲೊಮಾ ಕೋರ್ಸುಗಳ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು. ಅರ್ಜಿಯೊಂದಿಗೆ ವ್ಯಾಸಂಗ ಮಾಡಿದ ಕಾಲೇಜುಗಳಿಂದ ದೃಢೀಕರಿಸಿದ ಅಂಕಪಟ್ಟಿ, ಜಾತಿ ದೃಢೀಕರಣ, ಪ್ರಮಾಣ ಪತ್ರ ದೃಢೀಕರಣ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ-08272-225531, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ವಿದ್ಯಾರ್ಥಿ ನಿಲಯ ಸೇರ್ಪಡೆಗೆ
ಪ್ರಸಕ್ತ (2019-20) ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಗೊಳಪಡುವ ಮೆಟ್ರಿಕ್ ಪೂರ್ವ ಬಾಲಕರು ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರ ಬಾಲಕಿ, ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಸೇರ್ಪಡೆಯಾಗಲು ಇಚ್ಚಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿ ನಿಲಯಗಳ ವಿವರ: ಮಡಿಕೇರಿ ನಗರದ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ(5 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ), ನಗರದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ (ಮೆಟ್ರಿಕ್ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮಾತ್ರ), ಚೇರಂಬಾಣೆ ಮೆಟ್ರಿಕ್ ಪೂರ್ವ ಬಾಲಕರ ನಿಲಯ (5 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ).
ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯಗಳಿದ್ದು ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖಾ ವೆಬ್ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಹಾಸ್ಟೆಲ್ ಅಡ್ಮಿಷನ್ ಅಥವಾ hಣಣಠಿ://ಚಿಜmissioಟಿs.ಞಚಿಡಿ.ಟಿiಛಿ.iಟಿ/hosಣeಟಚಿಜmissioಟಿ ಪೋರ್ಟಲ್ನಲ್ಲಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಾಗ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ವಾಸ ಸ್ಥಳ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ಹಾಗೂ ಬ್ಯಾಂಕ್ ಪಾಸ್ಬುಕ್ ಪ್ರತಿ ಹಾಗೂ ಹಿಂದಿನ ತರಗತಿ ಅಂಕಪಟ್ಟಿಯನ್ನು ಹೊಂದಿರತಕ್ಕದ್ದು.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿ ಕಚೇರಿ ದೂ. 08272-223552 ನ್ನು ಸಂಪರ್ಕಿಸಬಹುದು.
ವೃತ್ತಿಪರ ಶಿಕ್ಷಣ ಕೈಗೊಳ್ಳಲು
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಇವರ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಸಿಖ್ಖ್ ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳು 2019-20ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿ.ಇ.ಟಿ) ಹಾಜರಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಕೈಗೊಳ್ಳಲು ನಿಗಮದಿಂದ ಅರ್ಜಿ ಆಹ್ವಾನಿಸಲಾಗಿದೆ. ಇಂಜಿನಿಯರಿಂಗ್ ಕೋರ್ಸಿಗೆ ವಾರ್ಷಿಕ ಗರಿಷ್ಠ ರೂ. 56 ಸಾವಿರ ಹಾಗೂ ಬಿ.ಡಿ.ಎಸ್. ಮತ್ತು ಎಂ.ಬಿ.ಬಿ.ಎಸ್. ಕೋರ್ಸ್ಗಳಿಗೆ ನೀಟ್ ಮೂಲಕ ವಾರ್ಷಿಕ ಗರಿಷ್ಠ ರೂ. 3,50,000 ಶೇ. 2ರ ಸೇವಾ ಶುಲ್ಕದ ಆಧಾರದ ಮೇಲೆ ಸಾಲ ಸೌಲಭ್ಯ ಕಲ್ಪಿಸಲಾಗುತ್ತದೆ. ಆನ್ಲೈನ್ ಅರ್ಜಿ ಸಲ್ಲಿಸಲು ಜೂನ್ 5 ಕೊನೆಯ ದಿನವಾಗಿದೆ.
ಈ ಸಂಬಂಧ 2019-20ನೇ ವರ್ಷದ ವೃತ್ತಿಪರ ಶಿಕ್ಷಣ ಸೇರ ಬಯಸುವ ಜಿಲ್ಲೆಯ ಕುಟುಂಬದ ವಾರ್ಷಿಕ ವರಮಾನ ರೂ. 6 ಲಕ್ಷ ಮಿತಿಯಲ್ಲಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಲು ತಿಳಿಸಲಾಗಿದೆ. ನಿಗಮದ ವೆಬ್ಸೈಟ್ Uಖಐ ಞmಜಛಿ.ಞಚಿಡಿ.ಟಿiಛಿ.iಟಿ/ಚಿಡಿivu2 ಲಿಂಕನ್ನು ತೆರೆದು ಆನ್ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ ಪ್ರಿಂಟ್ಔಟ್ನ್ನು ತೆಗೆದುಕೊಂಡು ಕಿಖ ಕೋಡಿನೊಂದಿಗೆ ಇತರ ದಾಖಲಾತಿಗಳೊಂದಿಗೆ ನೇರವಾಗಿ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಅಂತಹ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ/ಸಿ.ಇ.ಟಿಗೆ ಪಾವತಿಸಬೇಕಾದ ಶುಲ್ಕವನ್ನು ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೊಂದಾಣಿಕೆ ಮಾಡಲಾಗುತ್ತದೆ.ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ರಾಮ ಮಂದಿರದ ಹಿಂಭಾಗ, ಹೊಟೇಲ್ ಹಿಲ್-ವ್ಯೂ ಹತ್ತಿರ, ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ. ದೂರವಾಣಿ ಸಂಖ್ಯೆ 08272-220449 ನ್ನು ಸಂಪರ್ಕಿಸಬಹುದು. ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ರೇಶನ್ ಕಾರ್ಡ್ ಜೆರಾಕ್ಸ್ ಪ್ರತಿ. ಸಿ.ಇ.ಟಿ. ಪರೀಕ್ಷೆ ಪ್ರವೇಶ ಪತ್ರ. ಎಸ್.ಎಸ್.ಎಲ್.ಸಿ. ಅಂಕ ಪಟ್ಟಿಯ ದೃಢೀಕೃತ ಪ್ರತಿ. 50 ರೂಪಾಯಿಯ ಇ-ಸ್ಟ್ಯಾಂಪ್ನೊಂದಿಗೆ ಇಂಡಿಮ್ನಿಟಿ ಬಾಂಡ್. ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ ಸಲ್ಲಿಸಬೇಕು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.