ಮಡಿಕೇರಿ, ಮೇ 16: ಕಳೆದ ವರ್ಷದ ಪ್ರಾಕೃತಿಕ ವಿಕೋಪದ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದಲ್ಲಿ ತುಂಬಿಕೊಂಡಿರುವ ಹೂಳನ್ನು ತ್ವರಿತ ಗತಿಯಲ್ಲಿ ಮೇಲೆತ್ತಲು ಕಾರ್ಯೋನ್ಮುಖವಾಗುವಂತೆ ಮುಖ್ಯಮಂತ್ರಿಗಳ ಕಚೇರಿಯಿಂದ ಕಾವೇರಿ ನೀರಾವರಿ ನಿಗಮಕ್ಕೆ ಸೂಚನೆ ನೀಡಲಾಗಿದೆ ಎಂದು ಶಾಸಕ ಅಪ್ಪಚ್ಚು ರಂಜನ್ ಅವರು ತಿಳಿಸಿದ್ದಾರೆ.ಈ ಕುರಿತು ‘ಶಕ್ತಿ’ಗೆ ಮಾಹಿತಿ ನೀಡಿರುವ ಶಾಸಕರು ತಾವು ಇಂದು ಬೆಂಗಳೂರಿನಲ್ಲಿ ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಅವರ ಆಪ್ತ ಕಾರ್ಯದರ್ಶಿ ಪ್ರಭು ಅವರೊಂದಿಗೆ ಚರ್ಚಿಸಿದ್ದು, ಈ ಸಂದರ್ಭ ಅವರು ತ್ವರಿತಗತಿಯ ಕೆಲಸ ನಿರ್ವಹಣೆಗೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಸನ್ನ ಕುಮಾರ್ ಅವರಿಗೆ ಸೂಚಿಸಿರುವದಾಗಿ ತಿಳಿಸಿದ್ದಾರೆ.