ಕೂಡಿಗೆ, ಮೇ 17: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹುದುಗೂರು ಗ್ರಾಮದ ಶ್ರೀ ಉಮಾಮಹೇಶ್ವರ ಕ್ಷೇತ್ರದ 29ನೇ ವರ್ಷದ ಪ್ರತಿಷ್ಠಾಪನಾ ಉತ್ಸವವು ಶ್ರದ್ಧಾಭಕ್ತಿಯಿಂದ ನೆರವೇರಿತು.
ಬೆಳಿಗ್ಗೆ 9 ಗಂಟೆಯಿಂದ ಶ್ರೀ ಗಣಪತಿ ಹೋಮ, ಶ್ರೀ ಮೃತ್ಯಂಜಯ ಹೋಮ, ಪ್ರಧಾನ ದೇವರಿಗೆ ಹಾಗೂ ಇತರೆ ಉಪದೇವತೆಗಳಿಗೆ ವಿಶೇಷ ಅಭಿಷೇಕ, ಅರ್ಚನೆ ಹಾಗೂ ವಿವಿಧ ಪೂಜಾ ಕೈಂಕರ್ಯಗಳು ಕೇರಳದ ತಂತ್ರಿಗಳಾದ ಶ್ರೀನಿಧಿ ಅವರ ನೇತೃತ್ವದಲ್ಲಿ ನಡೆದವು.
ಮಧ್ಯಾಹ್ನ 1 ಗಂಟೆಗೆ ಮಹಾಮಂಗಳಾರತಿ ನಡೆದ ನಂತರ ತೀರ್ಥಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ನಡೆಯಿತು.