ಮಡಿಕೇರಿ, ಮೇ 18: ಪ್ರಸಕ್ತ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮೊ ಕೋರ್ಸ್‍ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ವಿಷಯದಲ್ಲಿ ಉತ್ತೀರ್ಣರಾಗಿರಬೇಕು, ಸಾಮಾನ್ಯ ವರ್ಗದ ಅಭ್ಯರ್ಥಿಗಳು 15-23 ರ ವಯೋಮಿತಿಯಲ್ಲಿರಬೇಕು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 15-25ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢಿಕೃತ ಅಂಕಗಳು ಮೆರಿಟ್ ಲೆಕ್ಕಚಾರಕ್ಕೆ ಆಧಾರವಾಗಿರುತ್ತದೆ.
ಡಿಪ್ಲೋಮಾ ಕೋರ್ಸಿಗಾಗಿ ಲಭ್ಯವಿರುವ ಸಂಸ್ಥೆಗಳು ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ,ಗದಗ್ ಬೆಟಗೇರಿಯಲ್ಲಿ 22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ,ಸೇಲಂ ತಮಿಳುನಾಡು 15 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ, ಆಂದ್ರಪ್ರದೇಶ 3 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು ಕೇರಳ 2 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವದು.
ಆಸಕ್ತಿಯುಳ್ಳ ಅಭ್ಯರ್ಥಿಗಳು ಕಚೇರಿಯಿಂದ ಅರ್ಜಿಗಳನ್ನು ಪಡೆದು ಪೂರ್ಣವಾಗಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ತಾ. 31 ರೊಳಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಕಚೇರಿಗೆ ಸಲ್ಲಿಸುವದು, ಅಥವಾ ಜೂನ್ 10 ರೊಳಗೆ ಗದಗ್ ಬೆಟಗೇರಿಯಲ್ಲಿನ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯ ಕಚೇರಿಗೆ ನೇರವಾಗಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಮತ್ತು ಹೆಚ್ಚಿನ ಮಾಹಿತಿಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.