ಕೇದಾರನಾಥದಲ್ಲಿ ಪೂಜೆ ಸಲ್ಲಿಸಿದ ಮೋದಿ
ಉತ್ತರಾಖಂಡ್, ಮೇ 18: 2019 ರ ಲೋಕಸಭಾ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಕೊನೆಯ ಹಂತದ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇದೆ. ಈ ನಡುವೆ ದೇಶಾದ್ಯಂತ ಭರ್ಜರಿ ಪ್ರಚಾರ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ನಲ್ಲಿರುವ ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದರೆ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಗುಜರಾತ್ ನಲ್ಲಿರುವ ಸೋಮನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೇದಾರನಾಥದಲ್ಲಿ ಪೂಜೆ ಸಲ್ಲಿಸಿದ ಬಳಿಕ ಬದ್ರಿನಾಥ್ ಗೂ ತೆರಳಿ ಪೂಜೆ ಸಲ್ಲಿಸಿದ್ದಾರೆ. ತಾ. 19 ರಂದು ವಾರಾಣಸಿಯೂ ಸೇರಿದಂತೆ ಒಟ್ಟಾರೆ 59 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ರೂ. 3 ಕೋಟಿ ಮೌಲ್ಯದ ರಕ್ತಚಂದನ ವಶ
ಬೆಂಗಳೂರು, ಮೇ 18: ಬೆಂಗಳುರು ಸಿಟಿ ಪೆÇಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಸುಮಾರು ಮೂರು ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನ ವಶಕ್ಕೆ ಪಡೆದಿದ್ದಾರೆ. ರಕ್ತ ಚಂದನ ಕಳ್ಳ ಸಾಗಣೆ ಮಾಡುತ್ತಿದ್ದ ಗುಂಪನ್ನು ಬಂಧಿಸಿದ ಪೆÇಲೀಸರು 4 ಟನ್ ತೂಕದ ರಕ್ತ ಚಂದನವನ್ನು ವಶಕ್ಕೆ ಪಡೆದಿದ್ದಾರೆ
ಭೀಕರ ಅಪಘಾತ : 5 ಸಾವು
ಮುದ್ದೇಬಿಹಾಳ, ಮೇ 18: ಸಂಬಂಧಿಕರ ಶವ ಸಂಸ್ಕಾರ ಮುಗಿಸಿ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿಯಾಗಿದ್ದು ಇಬ್ಬರು ಮಹಿಳೆಯರು ಸೇರಿ ಐವರು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕಂದಗನೂರು ಗ್ರಾಮದ ಬಳಿ ನಡೆದಿದೆ. ಮೃತರೆಲ್ಲರೂ ಬಾಗಲಕೋಟೆ ಜಿಲ್ಲೆ ಗುಳೇನಗುಡ್ಡದ ಹಳದೂರ ಗ್ರಾಮಸ್ಥರಾಗಿದ್ದಾರೆ. ಮೃತಪಟ್ಟವರ ವಿವರ ಇನ್ನೂ ಲಭ್ಯವಾಗಿಲ್ಲ. ಘಟನೆಯಲ್ಲಿ ಹತ್ತಕ್ಕೆ ಹೆಚ್ಚು ಮಂದಿಗೆ ಗಾಯಗಳಾಗಿದ್ದು ಅವರನ್ನು ಮುದ್ದೇಬಿಹಾಳದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿದೆ. ಮುದ್ದೇಬಿಹಾಳ ಪೆÇಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಶ್ರೀನಗರ, ಮೇ 18: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪುಲ್ವಾಮಾ ಉಗ್ರ ದಾಳಿಯ ಬಳಿಕ ಭಾರತೀಯ ಸೇನೆ ಜೈಶ್ ಉಗ್ರರ ಹುಟ್ಟಡಗಿಸಿದೆ. ಇದೀಗ ಗಡಿಯಲ್ಲಿ ಬಾಲ ಬಿಚ್ಚುತ್ತಿರುವ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಉಗ್ರರನ್ನು ಸೇನೆ ಹೊಡೆದುರುಳಿಸಿದೆ. ಆವಂತಿಪುರದಲ್ಲಿ ಅಡಗಿ ಕುಳಿತಿದ್ದ ಉಗ್ರ ವಿರುದ್ಧ ಭಾರತೀಯ ಸೇನೆ ಎನ್ಕೌಂಟರ್ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು ಮತ್ತೋರ್ವ ಅಡಗಿ ಕುಳಿತ್ತಿದ್ದ. ಆತನನ್ನು ಭಾರತೀಯ ಸೇನೆ ಹತ್ಯೆಗೈದಿದೆ. ಉಗ್ರರ ಪೈಕಿ ಓರ್ವನನ್ನು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಶೌಕತ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದೆ.