ಮಡಿಕೇರಿ, ಮೇ 18 : ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಹತ್ಯೆಗೈದ ನಾಥೂರಾಮ್ ಗೋಡ್ಸೆ ಅವರನ್ನು ದೇಶದ್ರೋಹಿ ಎಂದು ಕರೆಯದೆ ಅಪ್ಪಟ ದೇಶಭಕ್ತ ಎಂದು ವಿಜೃಂಭಿಸಿದ ಬಿಜೆಪಿ ನಾಯಕಿ ಸಾದ್ವಿ ಪ್ರಜ್ಞಾಸಿಂಗ್ ಮತ್ತು ಅವರ ಹೇಳಿಕೆಯನ್ನು ಬೆಂಬಲಿಸಿದ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಕೇಂದ್ರ ಸಚಿವ ಅನಂತ್‍ಕುಮಾರ್‍ಹೆಗಡೆ ಅವರುಗಳÀ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟಿಸಿದ ಕಾಂಗ್ರೆಸ್ ಪ್ರಮುಖರು ಬಿಜೆಪಿಯ ಮೂವರು ನಾಯಕರ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ಕೆ.ಪಿ.ಸಿ.ಸಿ. ಹಿರಿಯ ಉಪಾಧ್ಯಕ್ಷ ಮಿಟ್ಟು ಚಂಗಪ್ಪ, ಸದಸ್ಯÀ ಟಿ.ಪಿ.ರಮೇಶ್, ತೆನ್ನಿರಾ ಮೈನಾ, ಕಾಂಗ್ರೆಸ್ ನಗರಾಧ್ಯಕ್ಷ ಕೆ.ಯು.ಅಬ್ದುಲ್‍ರಜಾಕ್, ಪ್ರಧಾನ ಕಾರ್ಯದರ್ಶಿ ಆರ್.ಪಿ. ಚಂದ್ರಶೇಖರ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಮಡಿಕೇರಿ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷÀ ಕೆ.ಇ.ಮ್ಯಾಥ್ಯು, ಮಹಿಳಾ ನಗರಾಧ್ಯಕ್ಷೆ ಪಾರ್ವತಿ ಫ್ಯಾನ್ಸಿ, ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಸಿದರು.