ಕೂಡಿಗೆ, ಮೇ 19: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿ ಅಣೆಕಟ್ಟೆಯ ಎದುರು ಅನಧಿಕೃತವಾಗಿ ಕಟ್ಟಡ ನಿರ್ಮಾಣವಾಗುತ್ತಿದ್ದು, ಸಾರ್ವಜನಿಕರು ಕಟ್ಟಡ ತೆರವಿಗೆ ಆಗ್ರಹಿಸಿದ್ದಾರೆ.
ಹಾರಂಗಿ ಅಣೆಕಟ್ಟೆಯ ನಿಷೇಧಿತ ಪ್ರದೇಶದಲ್ಲಿ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿದ್ದರೂ ಸಂಬಂಧಪಟ್ಟ ಇಲಾಖೆಯವರು ಕ್ರಮ ಕೈಗೊಳ್ಳುತ್ತಿಲ್ಲ. ಇದಕ್ಕೆ ಸಂಬಂಧಪಟ್ಟ ನೀರಾವರಿ ಇಲಾಖೆ ಹಾಗೂ ಪಂಚಾಯಿತಿ ಆಡಳಿತ ಮಂಡಳಿ ಮೌನವಾಗಿರುವದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಯೆಷಾ ಮಾತನಾಡಿ, ನಿಷೇಧಿತ ಪ್ರದೇಶದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡುತ್ತಿರುವವರು ಪಂಚಾಯಿತಿಯಲ್ಲಿ ಯಾವದೇ ಅನುಮತಿ ಪಡೆಯದೆ ನಿರ್ಮಾಣ ಮಾಡುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಿದ್ದಾರೆ.