ಮಡಿಕೇರಿ, ಮೇ 20 : ಆಲೂರು ಸಿದ್ದಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ತಾ. 21 ರಂದು (ಇಂದು) ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ಹೊನ್ನೆಕೊಪ್ಪಲು, ಹೊಸಗುತ್ತಿ, ಮಾಲಂಬಿ, ಗೋಣಿಮರೂರು, ಸಿದ್ದಲಿಂಗಪುರ, ಆಲೂರು ಸಿದ್ದಾಪುರ, ಗಣಗೂರು ಹಾರೋಹಳ್ಳಿ ಸುತ್ತಮುತ್ತ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹಾಗೆಯೇ ವೀರಾಜಪೇಟೆ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಗೋಣಿಕೊಪ್ಪಲು, ವೀರಾಜಪೇಟೆ, ಬೇತ್ರಿ, ಪಾಲಂಗಾಲ ಹಾಗೂ ಮೂರ್ನಾಡು ವಿದ್ಯುತ್ ಉಪ-ಕೇಂದ್ರದಿಂದ ಹೊರ ಹೋಗುವ ಎಲ್ಲಾ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಹಾಗೂ ಕಾಮಗಾರಿ ಕೈಗೊಳ್ಳಬೇಕಿರುವದರಿಂದ ತಾ. 21 ರಂದು (ಇಂದು) ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವದು. ವೀರಾಜಪೇಟೆ, ಗಾಂಧಿನಗರ, ಮುಖ್ಯರಸ್ತೆ, ಮಗ್ಗುಲ, ಪಂಜರ್‍ಪೇಟೆ, ಬಿಟ್ಟಂಗಾಲ, ವಿ.ಬಾಡಗ, ಆರ್ಜಿ, ಬೇಟೋಳಿ, ಹೆಗ್ಗಳ, ಕಾಕೋಟುಪರಂಬು, ಕಡಂಗ, ಬೇತ್ರಿ, ಕೆದಮುಳ್ಳೂರು, ಪಾಲಂಗಾಲ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.