ಗೋಣಿಕೊಪ್ಪ ವರದಿ, ಮೇ 20 : ವೀರಾಜಪೇಟೆ ತಾಲೂಕು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ತಾಲೂಕು ಅಧ್ಯಕ್ಷ ಎಸ್. ಎಂ. ಚಂಗಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.
ಪತ್ರಕರ್ತರ ಸಂಘದ ರಾಷ್ಟ್ರೀಯ ಸಮಿತಿ ಸದಸ್ಯ ಮುರಳೀಧರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಘದ ಚಟುವಟಿಕೆಗೆ ಹೆಚ್ಚು ಒತ್ತು ನೀಡುವಂತೆ ಸಲಹೆ ನೀಡಿದರು. ಆರ್ಥಿಕ ಕ್ರೋಡೀಕರಣ ಹಾಗೂ ಸದಸ್ಯರನ್ನು ಒಟ್ಟುಗೂಡಿಸಲು ಹಲವು ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು. ಜಿಲ್ಲಾ ಕಾರ್ಯದರ್ಶಿ ಎಚ್. ಕೆ. ಜಗದೀಶ್ ಮಾತನಾಡಿ, ಸದಸ್ಯರುಗಳನ್ನು ಒಂದುಗೂಡಿಸಲು ನಿರಂತರ ಕಾರ್ಯ ಚಟುವಟಿಕೆಯಲ್ಲಿ ಸಂಘ ತೊಡಗಿಸಿಕೊಳ್ಳಬೇಕಾಗಿದೆ ಎಂದರು. ವೀಕ್ಷಕರಾಗಿ ಜಿಲ್ಲಾ ಪತ್ರಕರ್ತರ ಸಂಘದ ಅರುಣ್ ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಉಪಾಧ್ಯಕ್ಷ ಸುಬ್ರಮಣಿ, ಕಾರ್ಯದರ್ಶಿ ಸಣ್ಣುವಂಡ ಕಿಶೋರ್ ನಾಚಪ್ಪ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರೆಜಿತ್ಕುಮಾರ್ ವರದಿ ವಾಚಿಸಿದರು. ಖಜಾಂಜಿ ರಾಜೇಶ್ ಲೆಕ್ಕಪತ್ರ ಮಂಡಿಸಿದರು.