ಕೂಡಿಗೆ, ಮೇ 20: ಕೂಡುಮಂಗಳೂರು ಗ್ರಾಮ ಪಂಚಾಯ್ತಿಯ ಹಾರಂಗಿ ಅಣೆಕಟ್ಟೆಯ ಮುಂಭಾಗದಲ್ಲಿರುವ ನಿಷೇದಿತ ಜಾಗದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ಮಾಡುತ್ತಿರುವ ಬಗ್ಗೆ ಸ್ಥಳೀಯ ಗ್ರಾಮಸ್ಥರ ಆರೋಪದ ಮೇರೆಗೆ ಕೂಡುಮಂಗಳೂರು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಆಯಿಷಾ ಹಾಗೂ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜೇಗೌಡ ಪರಿಶೀಲನೆ ನಡೆಸಿದರು.
ಈಗಾಗಲೇ ಸ್ಪಲ್ಪ ಮಟ್ಟಿಗೆ ಕಾಮಗಾರಿ ನಡೆದಿದ್ದು, ಕಾಮಗಾರಿಯನ್ನು ಸ್ಥಗಿತಗೊಳಿಸಿ ಜಾಗವನ್ನು ತೆರವುಗೊಳಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದರು. ಈ ಸಂದರ್ಭ ಕೂಡುಮಂಗಳೂರು ಗ್ರಾಂ ಪಂಚಾಯ್ತಿ ಕಾರ್ಯದರ್ಶಿ ಮಾದಪ್ಪ, ಸಿಬ್ಬಂದಿ ವರ್ಗ, ನೀರಾವರಿ ಇಲಾಖೆಯ ಸಹಾಯಕ ಅಧಿಕಾರಿಗಳು ಇದ್ದರು.