ಮಡಿಕೇರಿ ಮೇ 19: ಮಡಿಕೇರಿಯ ಮ್ಯಾನ್ಸ್ ಕಾಂಪೌಂಡ್ ಕ್ಲಬ್‍ನ ಸುವರ್ಣ ಮಹೋತ್ಸವದ ಅಂಗವಾಗಿ ತಾ. 25 ಮತ್ತು 26ರಂದು ಜಿಲ್ಲಾಮಟ್ಟದ ಕಾಲ್ಚೆಂಡು ಪಂದ್ಯಾವಳಿಯನ್ನು ಜಿಲ್ಲಾ ಕ್ರೀಡಾಂಗಣದ ಬಳಿಯ ನಗರದ ಜೂನಿಯರ್ ಕಾಲೇಜಿನ ಫುಟ್‍ಬಾಲ್ ಮೈದಾನದಲ್ಲೇ ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಕ್ರಿಸ್ಟೋಫರ್ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ಈ ಹಿಂದೆ ಪಂದ್ಯಾವಳಿ ನಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ ಎಂದು ತಿಳಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಫುಟ್‍ಬಾಲ್ ಮೈದಾನಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪಂದ್ಯಾವಳಿಯಲ್ಲಿ 26 ತಂಡಗಳಿಗೆ ಬದಲಾಗಿ 40 ತಂಡಗಳಿಗೆ ಅವಕಾಶ ನೀಡಲು ಉದ್ದೇಶಿಸಲಾಗಿದೆ. ಮೊದಲು ನೋಂದಣಿ ಮಾಡಿಕೊಂಡ 40 ತಂಡಗಳನ್ನು ಮಾತ್ರ ಪರಿಗಣಿಸಲಾಗುವದು. ಆಸಕ್ತ ತಂಡಗಳು ತಾ. 22ರ ಒಳಗಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಸರು ನೋಂದಣಿಗೆ 7019909495, 9448976406 ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.

ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ 22,222, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 13,333 ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗುತ್ತದೆ. ಜತೆಗೆ ಅತ್ಯುತ್ತಮ ಗೋಲ್ ಕೀಪರ್, ಅತ್ಯುತ್ತಮ ಆಟಗಾರ ಸೇರಿದಂತೆ ವೈಯಕ್ತಿಕವಾಗಿ ವಿವಿಧ ವಿಭಾಗದಲ್ಲಿ ಬಹುಮಾನ ನೀಡಲಾಗುತ್ತದೆ.