ಮಡಿಕೇರಿ, ಮೇ 21: ಮಡಿಕೇರಿ ತಾಲೂಕು ಕೃಷಿ ಇಲಾಖೆ ವತಿಯಿಂದ ತಾ. 22 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಭಾಗಮಂಡಲ ಹೋಬಳಿ ಚೆಟ್ಟಿಮಾನಿ ಗ್ರಾಮದ ಸಮುದಾಯ ಭವನದಲ್ಲಿ “ಕೃಷಿ ಅಭಿಯಾನ” ಕಾರ್ಯಕ್ರಮ ಏರ್ಪಡಿಸಲಾಗಿದೆ. ಕೃಷಿ ಮತ್ತು ಕೃಷಿಗೆ ಸಂಬಂಧಿತ ವಿವಿಧ ಇಲಾಖೆಗಳ ವಸ್ತು ಪ್ರದರ್ಶನ, ರೈತರು, ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ನಡೆಯಲಿದೆ.