ಮಡಿಕೇರಿ, ಮೇ 21: ಮಡಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಒಕ್ಕೂಟ ಹಾಗೂ ಮೈಸೂರು-ಚಾಮರಾಜನಗರದ ನೇತ್ರಧಾಮ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದೊಂದಿಗೆ ತಾ. 25 ರಂದು ಬೆಳಿಗ್ಗೆ 10 ರಿಂದ ನಗರದ ಜನರಲ್ ತಿಮ್ಮಯ್ಯ ಶಾಲೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಈ ಶಿಬಿರದಲ್ಲಿ ನಗರಸಭೆಯ ಸ್ವಚ್ಛತಾ ಸಿಬ್ಬಂದಿಗಳಿಗೂ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷೆ ಕನ್ನಂಡ ಕವಿತಾ ಬೊಳ್ಳಪ್ಪ ಅವರು ತಿಳಿಸಿದ್ದಾರೆ.