ಮಡಿಕೇರಿ, ಮೇ 22: ವೀರಾಜಪೇಟೆ ತಾಲೂಕಿನ ತಿತಿಮತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಗಿರಿಜನ ಆಶ್ರಮ ಶಾಲೆ, ಮರೂರು, ತಿತಿಮತಿ ಆವರಣದಲ್ಲಿ ತಾ. 25 ರಂದು ಬೆಳಿಗ್ಗೆ 10.30 ಗಂಟೆಯಿಂದ ವೀರಾಜಪೇಟೆ ತಾಲೂಕು ವ್ಯಾಪ್ತಿಯಲ್ಲಿ ವಾಸವಿರುವ ಗಿರಿಜನರಿಗೆ ಆರೋಗ್ಯ, ಕಾನೂನು ಸುವ್ಯವಸ್ಥೆ, ಉದ್ಯೋಗ ಖಾತ್ರಿ, ನೈರ್ಮಲ್ಯ, ಕಂದಾಯ ಇಲಾಖಾ ಕಾರ್ಯಕ್ರಮಗಳ ಬಗ್ಗೆ ಒಂದು ದಿನದ ಜಾಗೃತಿ ಕಾರ್ಯಕ್ರಮ ನಡೆಸಲಿದೆ.