ಮಡಿಕೇರಿ ಮೇ 22 :ಕೊಡಗು ಜಿಲ್ಲೆಯಲ್ಲಿ ವಾಸಿಸುತ್ತಿರುವ ಬುಡಕಟ್ಟು ಯರವ ಸಮುದಾಯಕ್ಕೆ ಜೀವನೋಪಾಯಕ್ಕಾಗಿ ಜಮೀನು ನೀಡದೆ ಕೇವಲ 2-3 ಸೆಂಟ್ ನಿವೇಶನ ನೀಡಿ ವಂಚನೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಬುಡಕಟ್ಟು ಮುಖಂಡ ಪಿ. ಎಸ್. ಮುತ್ತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜೂ. 3 ರಂದು ಗೋಣಿಕೊಪ್ಪದಲ್ಲಿ ಯರವ ಜಾಗೃತಿ ಸಮಾವೇಶ ನಡೆಸಲಾಗುವದು ಎಂದು ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಮಾವೇಶಕ್ಕೂ ಮೊದಲು ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ವೃತ್ತ ನಿರೀಕ್ಷಕರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಗುವದು. ಬೇಡಿಕೆಗಳಿಗೆ ಜಿಲ್ಲಾಡಳಿತ ಸಕಾಲದಲ್ಲಿ ಸ್ಪಂದಿಸಿ ಸೂಕ್ತ ಕ್ರಮಕೈಗೊಳ್ಳದಿದ್ದಲ್ಲಿ ಆ. 15 ರ ಸ್ವಾತಂತ್ರ ದಿನದಂದು ಬೆಂಗಳೂರು ಫ್ರೀಡಂ ಪಾರ್ಕ್‍ನಲ್ಲಿ ಅರೆಬೆತ್ತಲೆಯಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವದು ಎಂದು ಎಚ್ಚರಿಕೆ ನೀಡಿದ್ದಾರೆ.