ಮಡಿಕೇರಿ, ಮೇ 22 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ತಾ. 26 ರಂದು ಮಡಿಕೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜನ್ಮ ದಿನಾಚರಣೆ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್ ದಿವಾಕರ್ ಅಂಬೇಡ್ಕರ್ ಜಯಂತಿ ಹಾಗೂ ಕ್ರೀಡಾ ಕೂಟದ ಕುರಿತು ಮಾಹಿತಿ ನೀಡಿದರು.

ಅಂಬೇಡ್ಕರ್ ಜಯಂತಿ ಪ್ರಯುಕ್ತ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾ ಕೂಟವನ್ನು ಆಯೋಜಿಸಲಾಗಿದೆ. ತಾ. 24 ಮತ್ತು 25 ರಂದು ಕ್ರಿಕೆಟ್, ಕಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾವಳಿ ನಡೆಯಲಿದೆ. 6 ಓವÀರ್‍ಗಳ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಕ್ರಿಕೆಟ್‍ನಲ್ಲಿ ಮೊದಲ ಬಹುಮಾನ ರೂ.10 ಸಾವಿರ ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನ ರೂ.7 ಸಾವಿರ ನಗದು ಹಾಗೂ ಟ್ರೋಫಿ. ಕಬಡ್ಡಿ ರೂ.5 ಸಾವಿರ ಪ್ರಥಮ, ರೂ.3 ಸಾವಿರದ ಐನೂರು ದ್ವಿತೀಯ, ವಾಲಿಬಾಲ್ ಪ್ರಥಮ 5 ಸಾವಿರ ರೂ. ಹಾಗೂ ದ್ವಿತೀಯ ರೂ.3 ಸಾವಿರದ ಐನೂರು ನೀಡಲಾಗುವದು.

ತಾ. 24 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿರುವ ಕ್ರೀಡಾಕೂಟದ ಸಭಾ ಕಾರ್ಯಕ್ರಮವನ್ನು ವಾಣಿಜ್ಯೋದ್ಯಮಿಗಳ ವಿವಿದ್ದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ಎಂ.ಗಣೇಶ್ ಉದ್ಘಾಟಿಸಲಿದ್ದಾರೆ.

ಮುಖ್ಯ ಭಾಷಣಕಾರರಾಗಿ ಕೊಡಗು-ಮೈಸೂರು ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ, ಮುಖ್ಯ ಅತಿಥಿಗಳಾಗಿ ಉದ್ಯಮಿ ಶರೀನ್, ಲೋಕೊಪಯೋಗಿ ಇಲಾಖೆ ಗುತ್ತಿಗೆದಾರÀ ಹೆಚ್.ಬಿ.ವಿಜಯಕುಮಾರ್, ಮಡಿಕೇರಿ ಶ್ರೀ ರಾಜರಾಜೇಶ್ವರಿ ಹೀರೊ ಶೋ ರೂಂನ ಮಾಲೀಕ ಜಿ. ಕಿರಣ ಕುಮಾರ್, ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ತಾ. 25 ರಂದು ಸಂಜೆ 5.30ಕ್ಕೆ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದ್ದು, ಜಿ.ಪಂ ಸಹಾಯಕ ಕಾರ್ಯದರ್ಶಿ ಹೆಚ್.ಎಸ್.ಬಾಬು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಅಖಿಲ ಭಾರತ ಅಂಚೆ ನೌಕರರ ಸಂಘದ ವಿಭಾಗೀಯ ಕಾರ್ಯದರ್ಶಿ ಟಿ.ಪಿ.ಶ್ರೀನಿವಾಸ್ ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಉದ್ಯಮಿ ಕೆ.ಕೆ.ದಾಮೋದರ್, ಮಡಿಕೇರಿ ತಾಲೂಕು ಕೃಷಿ ಅಧಿಕಾರಿ ವರದÀರಾಜು, ದಸಂಸ ಜಿಲ್ಲಾ ಸಂಘಟನಾ ಸಂಚಾಲಕÀ ಹೆಚ್.ಪಿ.ಶಿವಕುಮಾರ್ ಹಾಗೂ ಮಡಿಕೇರಿ ತಾಲೂಕು ಸಂಚಾಲಕ ಎಂ.ಪಿ. ದೀಪಕ್ ಪಾಲ್ಗೊಳ್ಳಲಿದ್ದಾರೆ.

ತಾ. 26 ರಂದು ಕಾವೇರಿ ಕಲಾಕ್ಷೇತ್ರದಲ್ಲಿ ಅಂಬೇಡ್ಕರ್ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಬೆಳಗ್ಗೆ 11.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಮೈಸೂರಿನ ಶಿವಯೋಗಿ ಉರಿಲಿಂಗ ಪೆದ್ದಿಮಠದ ಪೀಠಾಧ್ಯಕ್ಷ ಶ್ರೀಜ್ಞಾನಪ್ರಕಾಶ ಸ್ವಾಮೀಜಿ ಉದ್ಘಾಟಿಸಲಿದ್ದು, ಮುಖ್ಯ ಭಾಷಣಕಾರರಾಗಿ ಮೈಸೂರಿನ ಮಾನಸ ಗಂಗೋತ್ರಿ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊ. ಡಾ. ಜಿ.ಪಿ.ಮಹೇಶ್ ಚಂದ್ರಗುರು ಭಾಗವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಹಾಸನದ ಕರ್ನಾಟಕ ದ.ಸಂ.ಸ. ರಾಜ್ಯ ಸಂಚಾಲಕÀ ಎಂ.ಸೋಮಶೇಖರ, ಸೋಮವಾರಪೇಟೆ ಸಮಿತಿಯ ಸ್ಥಾಪಕ ಜಯಪ್ಪ ಹಾನಗಲ್, ಕೃಷಿ ಅಧಿಕಾರಿ ಎಂ.ವಿ.ವರದರಾಜು, ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ, ಜಿಲ್ಲಾ ಸಂಘಟನಾ ಸಂಚಾಲಕ ಈರಪ್ಪ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಇಬ್ಬರಿಗೆ ಪ್ರಶಸ್ತಿ

ದಲಿತ ಸಂಘರ್ಷ ಸಮಿತಿಯ ಸ್ಥಾಪಕರಾದ ಜಯಪ್ಪ ಹಾನಗಲ್ ಅವರಿಗೆ ಈ ಬಾರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವದು.

ಸರಕಾರಿ ಸೇವೆಯನ್ನು ದೇವರ ಕೆಲಸ ಎಂಬಂತೆ ಪ್ರಾಮಾಣಿಕವಾಗಿ ನಿಭಾಯಿಸುತ್ತಿರುವ ಮತ್ತು ಕೇವಲ ನಾಲ್ಕು ತಿಂಗಳಿನಲ್ಲಿ 500 ಕೃಷಿ ಹೊಂಡಗಳನ್ನು ನಿರ್ಮಿಸಿಕೊಟ್ಟ ಕೃಷಿ ಇಲಾಖೆಯ ಅಧಿಕಾರಿ ಎಂ.ವಿ. ವರದರಾಜ ಅವರಿಗೆ ಉತ್ತಮ ಸೇವಾ ಪ್ರಶಸ್ತಿಯನ್ನು ನೀಡಲಾಗುವದೆಂದು ದಿವಾಕರ್ ತಿಳಿಸಿದರು.

ಸಭಾ ಕಾರ್ಯಕ್ರಮಕ್ಕೂ ಮೊದಲು ಕಾರ್ಯಪ್ಪ ವೃತ್ತದ ಬಳಿಯ ಅಂಬೇಡ್ಕರ್ ಭವನದಿಂದ ಕಾವೇರಿ ಕಲಾಕ್ಷೇತ್ರದ ವರೆಗೆ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಕಾರ್ಯಕ್ರಮದಲ್ಲಿ ಶ್ರೀ ಶಕ್ತಿ ವೃದ್ಧಾಶ್ರಮದ ಸುಮಾರು 30 ಮಂದಿ ಹಿರಿಯರಿಗೆ ಹಾಗೂ ಪೌರ ಕಾರ್ಮಿಕರಿಗೆ ವಸ್ತ್ರಗಳನ್ನು ವಿತರಣೆ ಮಾಡಲಾಗುವದು.

ಸುದ್ದಿಗೋಷ್ಠಿಯಲ್ಲಿ ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ ಹಾಗೂ ತಾಲ್ಲೂಕು ಸಂಚಾಲಕ ಎ.ಪಿ.ದೀಪಕ್ ಉಪಸ್ಥಿತರಿದ್ದರು.