ಮಡಿಕೇರಿ, ಮೇ 23: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಯೂತ್ ರೆಡ್‍ಕ್ರಾಸ್ ಘಟಕದ ವತಿಯಿಂದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಭೋಧಕ ಆಸ್ಪತ್ರೆಗಳಲ್ಲಿ ಶ್ರಮದಾನ ಜರುಗಿತು.

ಯೂತ್ ರೆಡ್‍ಕ್ರಾಸ್ ವತಿಯಿಂದ ಆಯೋಜಿತ ಪ್ರಥಮ ಹಂತದ ಕಾರ್ಯಕ್ರಮವು ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿಗಳು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರೆಡ್‍ಕ್ರಾಸ್ ಘಟಕದ ಸ್ವಯಂ ಸೇವಕರು, ಬೋಧಕರು, ಗ್ರೂಪ್ ಡಿ ಸಿಬ್ಬಂದಿಗಳು ಸೇರಿದಂತೆ 10 ತಂಡಗಳು ಆಸ್ಪತ್ರೆ ವ್ಯಾಪ್ತಿಯಲ್ಲಿನ ತ್ಯಾಜ್ಯಗಳನ್ನು ವಿಲೇವಾರಿ ಮಾಡಿದರು.

ಸಂಸ್ಥೆಯ ನಿರ್ದೇಶಕರು ಮತ್ತು ಡೀನ್ ಡಾ. ಕೆ.ಬಿ. ಕಾರ್ಯಪ್ಪ, ಭೋದಕ ಆಸ್ಪತ್ರೆಯ ಸ್ಥಾನೀಯ ವೈದ್ಯಾಧಿಕಾರಿ ಡಾ. ಮಂಜುನಾಥ್, ಮುಖ್ಯ ಆಡಳಿತಾಧಿಕಾರಿ ಮೇರಿ ನಾಣಯ್ಯ, ವೈದ್ಯರು ಕಾರ್ಯಕ್ರಮದಲ್ಲಿ ಮಾರ್ಗದರ್ಶನ ನೀಡಿದರು.