ಕರಿಕೆ: ದೇಶದಲ್ಲಿ ಅತ್ಯಧಿಕ ಸ್ಥಾನಗಳಲ್ಲಿ ಬಿಜೆಪಿ ಹಾಗೂ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ಜಯಗಳಿಸಿದ ಹಿನ್ನೆಲೆಯಲ್ಲಿ ಕರಿಕೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಚೆತ್ತುಕಾಯದಿಂದ ಗಡಿ ಭಾಗದ ಚೆಂಬೇರಿ ತನಕ ಎಂಟು ಕಿ.ಮಿ. ವಾಹನಗಳಲ್ಲಿ ಮೆರವಣಿಗೆ ತೆರಳಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಬಾಜಪ ಗ್ರಾಮ ಸಮಿತಿ ಅದ್ಯಕ್ಷ ಹೊಸಮನೆ ಹರೀಶ್,ಜಿ.ಪಂ.ಸದಸ್ಯೆ ಕವಿತಾ ಪ್ರಭಾಕರ್, ಗ್ರಾಮ ಪಂಚಾಯತಿ ಸದಸ್ಯೆ ಜಯಂತಿ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.