ಕುಶಾಲನಗರ, ಮೇ 23: ಕುಶಾಲನಗರ ಅರಣ್ಯ ವಲಯದ ಬಾಳುಗೋಡು ಬಳಿ ಬೀಟೆ ಮರವನ್ನು ಅಕ್ರಮವಾಗಿ ಸಾಗಾಟ ಮಾಡಿದ ಪ್ರಕರಣದ ಬಗ್ಗೆ ‘ಶಕ್ತಿ’ ಪತ್ರಿಕೆಯಲ್ಲಿ ವರದಿಯಾದ ಬೆನ್ನಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಮೊಕದ್ದಮೆ ದಾಖಲಿಸಿದ್ದಾರೆ.

ಬಾಳುಗೋಡು ಬಳಿ ಖಾಸಗಿ ವ್ಯಕ್ತಿಯೊಬ್ಬರ ತೋಟದಲ್ಲಿದ್ದ ಬೀಟೆ ಮರವನ್ನು ಸಾಗಾಟ ಮಾಡಿರುವ ಬಗ್ಗೆ ಶಕ್ತಿ ಬೆಳಕಿಗೆ ತಂದಿತ್ತು. ಈ ಹಿನೆÀ್ನಲೆಯಲ್ಲಿ ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್‍ಕುಮಾರ್ ಮತ್ತು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ್ ಅವರುಗಳು ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ಕ್ರಮಕೈಗೊಳ್ಳುವದಾಗಿ ‘ಶಕ್ತಿ’ಗೆ ಪ್ರತಿಕ್ರಿಯಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳು ತೋಟದ ಮಾಲೀಕರು ಮತ್ತು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ್ದು ಪ್ರಕರಣದ ಬಗ್ಗೆ ಮೊಕದ್ದಮೆ ದಾಖಲಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.