ಮಡಿಕೇರಿ, ಮೇ 23: ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್‍ಎಎಲ್) ಇವರು ನಡೆಸುತ್ತಿರುವ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2019-20ನೇ ಸಾಲಿನಲ್ಲಿ ಸಿ.ಎನ್.ಸಿ.ಪ್ರೋಗ್ರಾಮರ್ ಹಾಗೂ ಆಪರೇಟರ್ ವೃತ್ತಿಯಲ್ಲಿ ಪೂರ್ಣಾವಧಿ ಶಿಶಿಕ್ಷು ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು 2019ರ ಜೂನ್ 10 ರೊಳಗೆ ಟೆಕ್ನಿಕಲ್ ಟ್ರೈನಿಂಗ್ ಇನ್ಸ್‍ಟ್ಯೂಟ್, ಹಿಂದೂಸ್ತಾನ್ ಏರೋನಾಟಿಕ್ಸ್ ಲಿ. ವಿಮಾನಪುರ ಪೋಸ್ಟ್, ಬೆಂಗಳೂರು-560017 ಇಲ್ಲಿಗೆ ಸಲ್ಲಿಸಬಹುದು.ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಅಥವಾ 10ನೇ ತರಗತಿಯಲ್ಲಿ ತೇರ್ಗಡೆ. ಅರ್ಹತಾ ಪರೀಕ್ಷೆಯಲ್ಲಿ ಸಾಮಾನ್ಯ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕನಿಷ್ಟ ಶೇ. 60 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಶೇಷಚೇತನ ಅಭ್ಯರ್ಥಿಗಳು ಕನಿಷ್ಟ ಶೇ. 50 ಅಂಕಗಳನ್ನು ಪಡೆದಿರಬೇಕು. 2019ರ ಜೂನ್ 1 ಕ್ಕೆ ಅನ್ವಯವಾಗುವಂತೆ ಕನಿಷ್ಟ 15 ಹಾಗೂ ಗರಿಷ್ಠ 18 ವರ್ಷಗಳು. ಅಭ್ಯರ್ಥಿಗಳು ಆರ್ಥಿಕವಾಗಿ ಹಿಂದುಳಿದವರಾಗಿರಬೇಕು ಹಾಗೂ ಬಿ.ಪಿ.ಎಲ್. ಅಥವಾ ಅಂತ್ಯೋದಯ ಪಡಿತರ ಚೀಟಿಯನ್ನು ಹೊಂದಿರಬೇಕು.

ತರಬೇತಿಯ ಅವಧಿ ಹದಿನೈದು ತಿಂಗಳುಗಳಾಗಿದ್ದು, ತರಬೇತಿಯನ್ನು ಉಚಿತವಾಗಿ ನೀಡಲಾಗುವದು. ತರಬೇತಿಯ ಅವಧಿಯಲ್ಲಿ ಶಿಷ್ಯ ವೇತನ ನೀಡಲಾಗುವದು. ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವದು. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ತಿತಿತಿ.hಚಿಟ-iಟಿಜiಚಿ.ಛಿom ರಿಂದ ಪಡೆಯಬಹುದಾಗಿದೆ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇಲ್ಲಿಂದ ಪಡೆಯಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಸಿ. ಜಗನ್ನಾಥ್ ತಿಳಿಸಿದ್ದಾರೆ.

ಪಿ.ಹೆಚ್.ಡಿ. ಫೆಲೋಶಿಪ್‍ಗೆ

ಪ್ರಸಕ್ತ(2019-20)ೀ ಸಾಲಿನ ಅಲ್ಪಸಂಖ್ಯಾತರ ನಿದೇರ್ಶನಾಲಯ ಬೆಂಗಳೂರು ವತಿಯಿಂದ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಅಭ್ಯರ್ಥಿಗಳಿಗೆ ಎಂ.ಫಿಲ್ ಮತ್ತು ಪಿ.ಹೆಚ್.ಡಿ ಫೆಲೋಶಿಪ್‍ಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇಲಾಖಾ ವೆಬ್‍ಸೈಟ್ (ತಿತಿತಿ.goಞಜom.ಞಚಿಡಿ.ಟಿiಛಿ.iಟಿ) ಆಪ್‍ಲೈನ್‍ನಲ್ಲಿ ಅರ್ಜಿ ನಮೂನೆ ಪಡೆದುಕೊಂಡು, ಸೂಕ್ತ ದಾಖಲಾತಿಗಳೊಂದಿಗೆ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿಗೆ ಸಲ್ಲಿಬಹುದು.ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್‍ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಅನ್ನು ಹಾಗೂ ದೂರವಾಣಿ ಸಂಖ್ಯೆ 08272-225528/220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವಿನ್ ತಿಳಿಸಿದ್ದಾರೆ.

ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಪ್ರತ್ಯೇಕ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರಿಗೆ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಾಲಕರ ವಿದ್ಯಾರ್ಥಿ ನಿಲಯ ಕುಶಾಲನಗರದಲ್ಲಿ ಒಟ್ಟು 75 ವಿದ್ಯಾರ್ಥಿಗಳಿಗೆ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯ ಮಡಿಕೇರಿ ಪಟ್ಟಣದಲ್ಲಿ ಒಟ್ಟು 50 ವಿದ್ಯಾರ್ಥಿಗಳಿಗೆ ಅವಕಾಶವಿದೆ. ಪ್ರವೇಶ ಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 2.50 ಲಕ್ಷ ಒಳಗಿರಬೇಕು. ವಿದ್ಯಾರ್ಥಿಯು ಅರ್ಜಿ ನಮೂನೆಯ ಜೊತೆಗೆ ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, 2018-19ನೇ ಸಾಲಿನ ವಾರ್ಷಿಕ ಪರೀಕ್ಷೆಯ ಅಂಕಪಟ್ಟಿ, ಪಡಿತರ ಚೀಟಿ, ಆಧಾರ್ ಕಾರ್ಡ್, ವರ್ಗಾವಣೆ ಪ್ರಮಾಣ ಪತ್ರದ ದೃಢೀಕೃತ ಪ್ರತಿ, ವಾಸಸ್ಥಳದಿಂದ ಪ್ರವೇಶ ಕೋರಿರುವ ನಿಲಯಕ್ಕೆ ಇರುವ ದೂರದ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಪಡೆದ ದೂರದ ಪ್ರಮಾಣ ಪತ್ರ, ಎರಡು ಫೋಟೋಗಳೊಂದಿಗೆ ಸಲ್ಲಿಸುವದು.

ಅರ್ಜಿಯನ್ನು ಪಡೆದು ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ ಮಡಿಕೇರಿ. ದೂರವಾಣಿ ಸಂಖ್ಯೆ 08272-220214, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತಾಲೂಕು ಪಂಚಾಯಿತಿ ಕಾರ್ಯಾಲಯ, ಸೋಮವಾರಪೇಟೆ ದೂರವಾಣಿ ಸಂಖ್ಯೆ 8548068519/9148604400. ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ತಾಲೂಕು ಪಂಚಾಯಿತಿ ಕಾರ್ಯಲಯ, ಪೊನ್ನಂಪೇಟೆ ವೀರಾಜಪೇಟೆ ತಾಲೂಕು ದೂರವಾಣಿ ಸಂಖ್ಯೆ 9742378688/9900731037 ನ್ನು ಸಂಪರ್ಕಿಸಬಹುದು.

ವಿದ್ಯಾರ್ಥಿ ನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ

ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 5 ರಿಂದ 10 ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳು ಇಲಾಖಾ ಅಧಿಕೃತ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ರಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯಕ್ಕೆ 5 ರಿಂದ 10ನೇ ತರಗತಿ ಹಾಗೂ ಆಶ್ರಮ ಶಾಲೆಗಳಿಗೆ 1 ರಿಂದ 7ನೇ ತರಗತಿಯವರೆಗೆ ಪ್ರವೇಶ ಪಡೆಯಬಹುದಾಗಿದೆ. ಅರ್ಜಿಗಳನ್ನು ಖುದ್ದಾಗಿ ನಿಲಯ, ಆಶ್ರಮ ಶಾಲೆಗಳಲ್ಲಿ ಪಡೆದು ಸಲ್ಲಿಸಬೇಕಿದೆ. ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ವಿದ್ಯಾರ್ಥಿ ನಿಲಯ, ಆಶ್ರಮ ಶಾಲೆಗಳಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಹಾಗೂ ಇತರೆ ಸೌಲಭ್ಯಗಳಿದ್ದು ಹೆಚ್ಚಿನ ಮಾಹಿತಿಗೆ ಮೆಟ್ರಿಕ್ ಪೂರ್ವ ಬಾಲಕರ ನಿಲಯ ಕುಶಾಲನಗರ 9632330709, ಮೆಟ್ರಿಕ್ ಪೂರ್ವ ಬಾಲಕರ ನಿಲಯ 7348840070, ಮೆಟ್ರಿಕ್ ಪೂರ್ವ ಬಾಲಕರ ನಿಲಯ ಸೋಮವಾರಪೇಟೆ 9741747661,

ಮೆಟ್ರಿಕ್ ಪೂರ್ವ ಬಾಲಕರ ನಿಲಯ ಕೊಡ್ಲಿಪೇಟೆ 9731331282, ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯ ಕುಶಾಲನಗರ 9483648295, ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯ ಸೋಮವಾರಪೇಟೆ 9482194195, ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯ ಶನಿವಾರಸಂತೆ 9482789118, ಮೆಟ್ರಿಕ್ ಪೂರ್ವ ಗಿರಿಜನ ಬಾಲಕಿಯರ ನಿಲಯ ಕುಶಾಲನಗರ 9481884972, ಆಶ್ರಮ ಶಾಲೆ ಮಾಲಂಬಿ 8277277650, ಆಶ್ರಮ ಶಾಲೆ ಬಸವನಹಳ್ಳಿ 7259837385 ಹಾಗೂ ಆಶ್ರಮ ಶಾಲೆ ಯಡವನಾಡು 8618546009 ನ್ನು ವಿದ್ಯಾರ್ಥಿ ನಿಲಯ, ಆಶ್ರಮ ಶಾಲೆಗಳ ವಾರ್ಡನ್, ಮುಖ್ಯ ಶಿಕ್ಷಕರ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಶೇಖರ್ ತಿಳಿಸಿದ್ದಾರೆ.