ಸುಂಟಿಕೊಪ್ಪ: ಕೇಂದ್ರದಲ್ಲಿ ಬಿಜೆಪಿ ಪಕ್ಷ ಭಾರೀ ಬಹುಮತದೊಂದಿಗೆ ಗೆಲವು ಸಾಧಿಸುವ ಮೂಲಕ ಮತ್ತೊಮ್ಮೆ ಆಡಳಿತ ಗದ್ದುಗೆ ಹಿಡಿದಿದ್ದು, ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ತಿಂಡಿಗಳನ್ನು ಹಂಚಿ ವಿಜಯೋತ್ಸವ ಆಚರಿಸಿದರು.
ಕನ್ನಡ ವೃತ್ತದಲ್ಲಿ ಸುಂಟಿಕೊಪ್ಪ ನಗರ ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡು ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕುತ್ತ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ನರೇಂದ್ರಮೋದಿ, ರಾಜ್ಯ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್ ಅವರುಗಳಿಗೆ ಜೈಕಾರ ಕೂಗಿದರು. ನಂತರ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ತೆರಳಿ ಸಂಭ್ರಮಿಸಿದರು.
ಈ ಸಂದರ್ಭ ಬಿಜೆಪಿ ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ನಗರಾಧ್ಯಕ್ಷ ಪಿ.ಆರ್. ಸುನಿಲ್ಕುಮಾರ್, ತಾ.ಪಂ. ಸದಸ್ಯೆ ಓಡಿಯಪ್ಪನ ವಿಮಾಲಾವತಿ, ಗ್ರಾ.ಪಂ. ಸದಸ್ಯರುಗಳಾದ ಸಿ.ಚಂದ್ರ, ಗಿರಿಜಾ ಉದಯಕುಮಾರ್, ಬಿ.ಐ ಭವಾನಿ, ನಗರ ಕಾರ್ಯದರ್ಶಿ ಬಿ.ಕೆ. ಪ್ರಶಾಂತ್, ವಾಸು, ನಾಗೇಶ್ ಪೂಜಾರಿ, ಧನುಕಾವೇರಪ್ಪ, ರಂಜಿತ್, ಹಿರಿಯ ಮುಖಂಡರಾದ ಪಿ.ಕೆ. ಶೇಷಪ್ಪ, ಮಾಜಿ ತಾ.ಪಂ. ಉಪಾಧ್ಯಕ್ಷ ಶಂಕರನಾರಾಯಣ ಹಾಗೂ ಸಂದೀಪ್ ಮತ್ತಿತರರು ಇದ್ದರು.