ಗೋಣಿಕೊಪ್ಪ ವರದಿ, ಮೇ 23: ಅಕ್ರಮವಾಗಿ ಜಾನುವಾರು ಸಾಗಾಣೆ ಮಾಡುತ್ತಿದ್ದಾಗ ಪೊನ್ನಂಪೇಟೆ ಪೊಲೀಸರು 3 ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಮಾನಂದವಾಡಿ ಸುನೀರ್ (30) ಬಂಧಿತ ಆರೋಪಿಯಾಗಿದ್ದು, ಮತ್ತೊಬ್ಬ ಆರೋಪಿ ಬೇಗೂರು ಗ್ರಾಮದ ಜಿಯಾದ್ (28) ತಲೆ ಮರೆಸಿಕೊಂಡಿದ್ದಾನೆ.

ಬುಧವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಪೊನ್ನಂಪೇಟೆ ಮುತ್ತಪ್ಪ ದೇವಸ್ಥಾನ ಸಮೀಪ ವಾಹನದಲ್ಲಿ ಕೊಂಡೊಯ್ಯುತ್ತಿದ್ದಾಗ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ. ಬಿಟ್ಟಂಗಾಲ ಅಂಬಟ್ಟಿಯಿಂದ ಜಾನುವಾರುಗಳನ್ನು ಖರೀದಿಸಿ ಕೇರಳಕ್ಕೆ ಸಾಗಿಸುತ್ತಿದ್ದರು ಎನ್ನಲಾಗಿದೆ. ಪೊನ್ನಂಪೇಟೆ ಪೊಲೀಸ್ ಉಪ ನಿರೀಕ್ಷಕ ಮಹೇಶ್ ಹಾಗೂ ತಂಡ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದೆÉ. -ಸುದ್ದಿಪುತ್ರ