ಕೂಡಿಗೆ, ಮೇ 24: ಕೂಡಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಳೆಯ ಕುರಿತು ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ತಾಲೂಕು ಬಿ.ಸಿ.ಎಂ. ಅಧಿಕಾರಿ ಶ್ರೀಕಾಂತ್ ಮಳೆಯ ಮತ್ತು ಪ್ರಕೃತಿ ವಿಕೋಪದ ಸಂದರ್ಭ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆರು, ಅಶಾ ಕಾರ್ಯಕರ್ತೆರುಗಳಿಗೆ ಸಮಗ್ರವಾಗಿ ಮಾಹಿತಿ ನೀಡಿದರು. ಈ ಸಂದರ್ಭ ಗ್ರಾ.ಪಂ. ಉಪಾಧ್ಯಕ್ಷ ಗಿರೀಶ್‍ಕುಮಾರ್, ಸದಸ್ಯರಾದ ಪುಪ್ಪ, ಕಲ್ಪನಾ, ರಾಮಚಂದ್ರ, ಅಭಿವೃದ್ಧಿ ಅಧಿಕಾರಿ ಅಶ್ವಿನಿ, ಕಾರ್ಯದರ್ಶಿ ಶಿಲ್ಪಾ ಇದ್ದರು.