ಮಡಿಕೇರಿ, ಮೇ 24: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 2019-2024ರ ಅವಧಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೊಡಂದೇರ ಪಿ.ಗಣಪತಿ ಹಾಗೂ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ ಅವರುಗಳ ಅಧಿಕಾರ ಸ್ವೀಕಾರ ಸಮಾರಂಭವು ತಾ. 27 ರಂದು ಬೆಳಿಗ್ಗೆ 11 ಗಂಟೆಗೆ ಬ್ಯಾಂಕಿನ ಕಚೇರಿ ಆವರಣದಲ್ಲಿ ನಡೆಯಲಿದೆ ಎಂದು ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.