ನವದೆಹಲಿ, ಮೇ 24: ಸುಪ್ರೀಂಕೋರ್ಟ್‍ನ ನಾಲ್ವರು ಹೊಸ ನ್ಯಾಯಮೂರ್ತಿಗಳು ಇಂದು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು. ನೂತನ ನ್ಯಾಯ ಮೂರ್ತಿಗಳಾದ ಬಿ.ಆರ್. ಗವಾಯಿ, ಸೂರ್ಯಕಾಂತ್, ಅನಿರುದ್ಧ ಬೋಸ್, ಎ.ಎಸ್. ಬೋಪಣ್ಣ ಅವರಿಗೆ ಸುಪ್ರೀಂ ಕೋರ್ಟ್ (ಮೊದಲ ಪುಟದಿಂದ) ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಪ್ರಮಾಣ ವಚನ ಬೋಧಿಸಿದರು. ಸುಪ್ರೀಂಕೋರ್ಟ್‍ನ ಇತರ ಹಿರಿಯ ನ್ಯಾಯಮೂರ್ತಿಗಳು ಉಪಸ್ಥಿತರಿದ್ದರು. ಇವರ ಸೇರ್ಪಡೆಯೊಂದಿಗೆ ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. 2018 ಅಕ್ಟೋಬರ್‍ನಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿ ರಂಜಯ್ ಗೊಗೊಯ್ ಅವರು ಅಧಿಕಾರ ವಹಿಸಿಕೊಂಡ ಬಳಿಕ 10 ನ್ಯಾಯಮೂರ್ತಿಗಳ ಹುದ್ದೆಯನ್ನು ಭರ್ತಿ ಮಾಡಿದ್ದಾರೆ.