ಮಡಿಕೇರಿ, ಮೇ 25: ಪ್ರಸಕ್ತ (2019-20) ಸಾಲಿನಲ್ಲಿ ವೀರಾಜಪೇಟೆ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲಾಗುತ್ತಿರುವ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಪೊನ್ನಂಪೇಟೆ, ಹುದಿಕೇರಿ ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಮರಗೋಡು, ಪೊನ್ನಂಪೇಟೆ, ಶ್ರೀಮಂಗಲ ಹಾಗೂ ಬಿರುನಾಣಿ ಇಲ್ಲಿಗೆ ಪ್ರವೇಶ ಕೋರಿ 5ನೇ ತರಗತಿಯಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.