ವೀರಾಜಪೇಟೆ, ಮೇ 23: ವೀರಾಜಪೇಟೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ನಾರಾಯಣ ಹಾಗೂ ಸುನಿಲ್ ಎಂಬಿಬ್ಬರನ್ನು ಬಂಧಿಸಿ ಪೊಲೀಸರು ನಗದು ರೂ. 7,150 ಹಾಗೂ 76 ಪ್ಯಾಕೆಟ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಖಾಸಗಿ ಬಸ್ ನಿಲ್ದಾಣದಲ್ಲಿ ಸ್ಥಳೀಯರು ನೀಡಿದ ದೂರಿನ ಮೇರೆ ಪೊಲೀಸ್ ಸಬ್ಇನ್ಸ್ಪೆಕ್ಟರ್ ಸಂತೋಷ್ ಕಶ್ಯಪ್, ಸಿಬ್ಬಂದಿಗಳಾದ ಗಿರೀಶ್, ಯೋಗೀಶ್, ಲೋಕೇಶ್ ಹಾಗೂ ಮುನೀರ್ ದಾಳಿ ನಡೆಸಿದರು. ಲೋಕಸಭಾ ಚುನಾವಣೆಯ ಫಲಿತಾಂಶದ ಪ್ರಯುಕ್ತ ಮದ್ಯ ಮಾರಾಟ ನಿಷೇಧಿಸಲಾಗಿತ್ತು.